ಮುಂಬೈ : ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾಗೆ ಇಂದು ಬೆಳಿಗ್ಗೆ ಇಡಿ ಶಾಕ್ ನೀಡಿದ್ದು, ಅಶ್ಲೀಲ ಚಿತ್ರಗಳ ವಿತರಣೆ ಆರೋಪ ಪ್ರಕರಣಕ್ಕೇ ಸಂಬಂಧಪಟ್ಟಂತೆ ಇಡಿ ಅಧಿಕಾರಿಗಳು ಅವರ ನಿವಾಸದ ಮೇಲೆ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಹೌದು ಅಶ್ಲೀಲ ಜಾಲಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಮುಂಬೈನಲ್ಲಿರುವ ಉದ್ಯಮಿ ರಾಜ್ ಕುಂದ್ರಾ, ನಟಿ ಶಿಲ್ಪಾ ಶೆಟ್ಟಿ ಅವರ ಪತಿ ಅವರ ನಿವಾಸ ಮತ್ತು ಕಚೇರಿ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಇಂದು ದಾಳಿ ನಡೆಸಿತು. ಅಧಿಕಾರಿಗಳ ಪ್ರಕಾರ ಕುಂದ್ರಾ ಅವರ ಸಹಚರರ ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ.
ಅಶ್ಲೀಲ ಚಿತ್ರಗಳನ್ನು ನಿರ್ಮಿಸಿದ ಆರೋಪದ ಮೇಲೆ ಕುಂದ್ರಾ ಅವರನ್ನು ಜೂನ್ 2021 ರಲ್ಲಿ ಬಂಧಿಸಲಾಯಿತು. ಎರಡು ತಿಂಗಳು ಜೈಲಿನಲ್ಲಿ ಕಳೆದ ನಂತರ ಅವರಿಗೆ ಸೆಪ್ಟೆಂಬರ್ 2021 ರಲ್ಲಿ ಜಾಮೀನು ನೀಡಲಾಯಿತು. ಇದೀಗ ಇಡಿ ಅಧಿಕಾರಿಗಳು ಮತ್ತೆ ದಾಳಿ ಮಾಡಿದ್ದು ಹಲವು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.