ಬಳ್ಳಾರಿ: 09-ಬಳ್ಳಾರಿ (ಪ.ಪಂ) ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ, ಅಗತ್ಯ ಸೇವೆಗಳ ವರ್ಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಅಂಚೆ ಮತ ಪತ್ರಗಳನ್ವಯ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
ಅಂಚೆ ಮತ ಪತ್ರಗಳ ಮೂಲಕ ಮತ ಚಲಾಯಿಸಲು ಮೇ .1 ರಿಂದ .3 ರ ವರೆಗೆ ಬೆಳಿಗ್ಗೆ 09 ಗಂಟೆಯಿಂದ ಸಂಜೆ 05 ಗಂಟೆಯವರೆಗೆ ನಗರದ ರೈಲ್ವೇ ನಿಲ್ದಾಣದ ಎದುರುಗಡೆಯ ಜಿಲ್ಲಾಧಿಕಾರಿಗಳ ಕಚೇರಿಯ ಗಾಂಧಿಭವನದಲ್ಲಿ “ಅಂಚೆ ಮತದಾನ ಕೇಂದ್ರ”ವನ್ನು ತೆರೆಯಲಾಗಿದ್ದು, ಅಗತ್ಯ ಸೇವೆಗಳ ವರ್ಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ ಮತ್ತು ಸಿಬ್ಬಂದಿಗಳು ಮತ ಚಲಾಯಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.