ವರದಿ: ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ: ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೆಗೌಡರ ಮೇಲೆ ಸಾಮಾಜಿಕ ಜಾಲ ತಾಣದಲ್ಲಿ ಅವಹೇಳನ ಹೇಳಿಕೆ ಪೋಸ್ಟರ್ ಹಾಕುವ ವಿರುದ್ಧ ರಾಜ್ಯ ಪೊಲೀಸ್ ಇಲಾಖೆ ಕ್ರಮ ತೆಗೆದು ಕೊಳ್ಳುವಂತೆ ಹುಣಸೂರು ವಕೀಲ ಅಯರಹಳ್ಳಿ ಪ್ರವೀಣ್ ಒತ್ತಾಯಿಸಿದ್ದಾರೆ.
ಈಗಾಗಲೇ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸರ್ಕಾರ S I T ತನಿಖೆಗೆ ವಹಿಸಿದ್ದು ಅಧಿಕಾರಿಗಳು ತನಿಖಾ ಕಾರ್ಯವನ್ನು ನಡೆಸುತ್ತಿದ್ದಾರೆ ಈಗಿರುವಾಗ ಪ್ರಕರಣಕ್ಕು ಸಂಬಂಧ ಇಲ್ಲದ ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡ ಅವರ ಮೇಲೆ ಕೆಲವರು ಬಹಳ ಹಗುರವಾಗಿ ಮಾತನಾಡುತ್ತಿರುವುದು ಮತ್ತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್ ಗಳನ್ನು ಹಾಕಿ ನಿಂದಿಸುತ್ತಿರುವುದನ್ನು ಖಂಡಿಸಿದ್ದಾರೆ
ರಾಜ್ಯ ಮತ್ತು ದೇಶದ ಅಭಿವೃದ್ದಿಗೆ ಎಚ್.ಡಿ.ದೇವೇಗೌಡರು ಕೊಟ್ಟ ಕೊಡುಗೆ ಅಪಾರವಾದದ್ದು ಮೊಮ್ಮಗ ಮಾಡಿದ್ದಾನೆ ಎನ್ನಲಾದ ಪ್ರಕರಣಕ್ಕೆ ಇವರನ್ನು ಎಳೆದು ತರವುದನ್ನು ನಿಲ್ಲಿಸ ಬೇಕೆಂದು ಆಗ್ರಹಿಸಿದ್ದಾರೆ.
ಕೂಡಲೆ ದೇವೇಗೌರನ್ನು ನಿಂದಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೊಸ್ಟರ್ ಹಾಕುವುದನ್ನು ನಿಲ್ಲಿಸಬೇಕು ಹಾಗೂ ಒಂದು ವೇಳೆ ಹಾಕುವರ ವಿರುದ್ದ ಕಾನೂನು ಕ್ರಮ ಜರುಗಿಸುವಂತೆ ಪೊಲೀಸ್ ಇಲಾಖೆಯನ್ನು ಜೆಡಿಎಸ್ ಕಾನೂನು ಘಟಕದ ವತಿಯಿಂದ ಒತ್ತಾಯಿಸುವುದಾಗಿ ಆಯರಹಳ್ಳಿ ಪ್ರವೀಣ್ ತಿಳಿಸಿದ್ದು ಈ ಸಂಬಂಧ ಪೊಲೀಸ್ ಇಲಾಖೆಗೆ ಲಿಖಿತವಾಗಿ ಮನವಿ ಸಲ್ಲಿಸುವುದಾಗಿ ತಿಳಿಸಿದರು.