ಬೆಂಗಳೂರು: ಡಿ.23ರಂದು ನಿಗದಿಯಾಗಿದ್ದ 545 ಪಿಎಸ್ಐ ಹುದ್ದೆಗಳ ನೇಮಕಾತಿ ಮರು ಪರೀಕ್ಷೆಯನ್ನು ಒಂದು ತಿಂಗಳು ಅಂದರೆ 2024ರ ಜನವರಿ 23ಕ್ಕೆ ಮುಂದೂಡಿಕೆ ಮಾಡಲಾಗಿದೆ. ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಜತೆ ಚರ್ಚಿಸಿ ಗೃಹ ಸಚಿವ ಡಾ.ಪರಮೇಶ್ವರ್ ಮರು ಪರೀಕ್ಷೆ ದಿನಾಂಕ ಪ್ರಕಟಿಸಿದ್ದಾರೆ. ಪಿಎಸ್ಐ ಮರು ಪರೀಕ್ಷೆ ಮುಂದೂಡುವಂತೆ ಆಡಳಿತ, ವಿಪಕ್ಷ ಸದಸ್ಯರು ಆಗ್ರಹಿಸಿದ್ದರು. ಹಾಗಾಗಿ ಜ.23ರಂದು ಎಲ್ಲಾ 54,233 ಅಭ್ಯರ್ಥಿಗಳು ಬೆಂಗಳೂರಲ್ಲೇ ಪಿಎಸ್ಐ ಮರು ಪರೀಕ್ಷೆ ಬರೆಸಲು ನಿರ್ಧಾರ ಮಾಡಲಾಗಿದೆ.
ಎಮ್‌ಎಲ್‌ಸಿ ಶರಣಗೌಡ ಪಾಟೀಲ್ ಬಯ್ಯಾಪುರ ಮತ್ತು ಶಾಸಕ ಬಸನಗೌಡ ತುರವಿಹಾಳ ಅವರು ಮರುಪರೀಕ್ಷೆ ಮುಂದೂಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ಸಿಎಂ ಸಿದ್ದರಾಮಯ್ಯಗೆ ಇತ್ತೀಚೆಗೆ ಪತ್ರ ಬರೆದಿದ್ದರು.