ಚಾಮರಾಜನಗರ: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮವು 3ನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಹರವೆ ಮತ್ತು ಕಬ್ಬಳ್ಳಿ ಭಾಗದಲ್ಲಿ ನಾಳೆ ಚಾಮರಾಜನಗರದಲ್ಲಿ ವಿದ್ಯುತ್ ವ್ಯತ್ಯಯ ಡಿ. 17 ರಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಮೂಡ್ನಾಕೂಡು, ಮುಕ್ಕಡಹಳ್ಳಿ, ಉಡಿಗಾಲ, ನಂಜದೇವನಪುರ, ಕಲ್ಪುರ, ದೇವಲಾಪುರ, ತಮ್ಮಡಹಳ್ಳಿ, ಎನ್.ಜೆ.ವೈ, ಹಾಗೂ ಕಬ್ಬಳ್ಳಿ, ಸೋಮಳ್ಳಿ, ಪಡಗೂರು, ಬೆಳಚಲವಾಡಿ, ನಿಟ್ರೆ, ಅಗತಗೌಡನಹಳ್ಳಿ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯವಾಗಲಿದೆ. ಸಾರ್ವಜನಿಕರು ನಿಗಮದ ಜೊತೆ ಸಹಕರಿಸಬೇಕು. ವಿದ್ಯುತ್ ಸಂಬಂಧಿತ ದೂರು ಮತ್ತು ಸಹಾಯಕ್ಕಾಗಿ ಗ್ರಾಹಕರು ಉಚಿತ ದೂ.ಸಂ 1912 ಸಂಪರ್ಕಿಸುವಂತೆ ನಿಗಮದ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.