Friday, April 11, 2025
Google search engine

Homeರಾಜಕೀಯಅಧಿಕಾರ ಹಂಚಿಕೆ ಒಪ್ಪಂದ ಹೇಳಿಕೆ: ಅವರಿಬ್ಬರೇ ಎಲ್ಲಾ ಮಾಡಿಕೊಳ್ಳೋದಾದ್ರೆ ನಾವ್ಯಾಕೆ ಇರೋದು: ಪರಮೇಶ್ವರ್ ತೀವ್ರ ಅಸಮಾಧಾನ

ಅಧಿಕಾರ ಹಂಚಿಕೆ ಒಪ್ಪಂದ ಹೇಳಿಕೆ: ಅವರಿಬ್ಬರೇ ಎಲ್ಲಾ ಮಾಡಿಕೊಳ್ಳೋದಾದ್ರೆ ನಾವ್ಯಾಕೆ ಇರೋದು: ಪರಮೇಶ್ವರ್ ತೀವ್ರ ಅಸಮಾಧಾನ

ಬೆಂಗಳೂರು: ಅಧಿಕಾರ ಹಂಚಿಕೆ ಸಂಬಂಧ ಒಪ್ಪಂದವಾಗಿದೆ ಎಂಬ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ಇದೀಗ ಕರ್ನಾಟಕ ಕಾಂಗ್ರೆಸ್​ನಲ್ಲಿ ಮತ್ತೆ ಚರ್ಚೆ ಹುಟ್ಟು ಹಾಕಿದೆ. ಡಿಕೆಶಿ ಹೇಳಿಕೆಗೆ ಬುಧವಾರ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ನಮ್ಮ ನಡುವೆ ಯಾವ ಒಪ್ಪಂದವೂ ಆಗಿಲ್ಲ. ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳುತ್ತೇವೆ ಎಂದು ಹೇಳಿದ್ದರು. ಇದೀಗ ಅಧಿಕಾರ ಹಂಚಿಕೆ ಒಪ್ಪಂದ ಹೇಳಿಕೆ ಬಗ್ಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಪರಮೇಶ್ವರ್, ಒಪ್ಪಂದ ಆಗಿದೆ ಎಂದಾದರೆ ನಾವೆಲ್ಲರೂ ಯಾಕೆ ಇರಬೇಕು? ಅವರಿಬ್ಬರೇ ರಾಜಕಾರಣ ಮಾಡಿ, ಅವರಿಬ್ಬರೇ ನಡೆಸಿ ಬಿಡಲಿ. ಬೇರೆಯವರು ಇರುವುದೇ ಬೇಡವಾ ಎಂದು ಪ್ರಶ್ನಿಸಿದ್ದಾರೆ.

ಯಾವ ಒಪ್ಪಂದ ಆಗಿದೆಯೋ ನಮಗೆ ಗೊತ್ತಿಲ್ಲ. ​ನಾನು 2-3 ಜನರನ್ನು ದೆಹಲಿಯಲ್ಲಿ ಕೇಳಿದೆ, ಇಲ್ಲೂ ಕೇಳಿದೆ. ಒಪ್ಪಂದ ಆಗಿದೆ ಎಂದು ಯಾರೂ ಹೇಳಿಲ್ಲ. ಡಿಕೆ ಶಿವಕುಮಾರ್ ಯಾವ ಅರ್ಥದಲ್ಲಿ ‌ಹೇಳಿದರೋ ಗೊತ್ತಿಲ್ಲ. ಯಾವುದೇ ಒಪ್ಪಂದ ಆಗಿಲ್ಲ ಎಂದು ಸಿಎಂ ಸ್ಪಷ್ಟವಾಗಿ ಹೇಳಿದ್ದಾರೆ. ಆ ರೀತಿ ಆಗಲು ಸಾಧ್ಯವಿಲ್ಲ, ಹೈಕಮಾಂಡ್ ಬಿಟ್ಟು ಹೋಗಲ್ಲ. ಹೈಕಮಾಂಡ್ ತೀರ್ಮಾನ ಒಪ್ಪಿಕೊಳ್ಳುತ್ತೇವೆ ಎಂದು ಪರಮೇಶ್ವರ್ ಹೇಳಿದರು.

RELATED ARTICLES
- Advertisment -
Google search engine

Most Popular