Wednesday, May 20, 2026
Google search engine

Homeರಾಜಕೀಯಕಾಂಗ್ರೆಸ್‌ನಲ್ಲಿ ಮತ್ತೆ ಗರಿಗೆದರಿದ ಪವರ್ ಶೇರಿಂಗ್ ಚರ್ಚೆ : ಸಿಎಂ ಸಿದ್ದರಾಮಯ್ಯಗೆ ʼಹೈʼ ಬುಲಾವ್

ಕಾಂಗ್ರೆಸ್‌ನಲ್ಲಿ ಮತ್ತೆ ಗರಿಗೆದರಿದ ಪವರ್ ಶೇರಿಂಗ್ ಚರ್ಚೆ : ಸಿಎಂ ಸಿದ್ದರಾಮಯ್ಯಗೆ ʼಹೈʼ ಬುಲಾವ್

ಬೆಂಗಳೂರು : ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಯಶಸ್ವಿಯಾಗಿ ಮೂರು ವರ್ಷ ಪೂರೈಸಿದ ಬೆನ್ನಲ್ಲೇ, ಕರ್ನಾಟಕ ರಾಜಕೀಯದಲ್ಲಿ ಮತ್ತೊಮ್ಮೆ ಪವರ್ ಶೇರಿಂಗ್ ಹಾಗೂ ಸಂಪುಟ ಪುನಾರಚನೆಯ ಚರ್ಚೆಗಳು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಶೀಘ್ರದಲ್ಲೇ ದೆಹಲಿಗೆ ಆಗಮಿಸುವಂತೆ ಸೂಚನೆ ನೀಡಿದೆ ಎಂದು ಮೂಲಗಳು ತಿಳಿಸಿವೆ.

ಇತ್ತೀಚೆಗೆ‌ ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ರಚನೆಯಾದ ನಂತರ, ಎಐಸಿಸಿ ಇದೀಗ ಕರ್ನಾಟಕದ ರಾಜಕೀಯ ಬೆಳವಣಿಗೆಗಳತ್ತ ಗಮನ ಹರಿಸಿದೆ ಎನ್ನಲಾಗಿದ್ದು, ಈ ಸಂಬಂಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಿಎಂ ಜೊತೆ ಮಹತ್ವದ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಇನ್ನೊಂದೆಡೆ ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿ ಶೀಘ್ರದಲ್ಲೇ ವಿದೇಶ ಪ್ರವಾಸ ಕೈಗೊಳ್ಳಲಿರುವ ಹಿನ್ನೆಲೆ, ಅವರು ತೆರಳುವ ಮೊದಲು ಕರ್ನಾಟಕದಲ್ಲಿ ಕಳೆದ 2.5 ವರ್ಷಗಳಿಂದ ಚರ್ಚೆಯಾಗುತ್ತಿರುವ ಅಧಿಕಾರ ಹಂಚಿಕೆ ಸೂತ್ರಕ್ಕೆ ಅಂತಿಮ ತೆರೆ ಎಳೆಯಲು ಹೈಕಮಾಂಡ್ ಮುಂದಾಗಿದೆ ಎಂಬ ಮಾತುಗಳು ಕೇಳಿಬರುತ್ತಿದೆ ಅಲ್ಲದೆ, ದೆಹಲಿ ಸಭೆಯಲ್ಲೇ ಎಲ್ಲವೂ ಅಂತಿಮವಾಗಲಿದ್ದು, ಶೀಘ್ರದಲ್ಲೇ ಎಲ್ಲ ಕುತೂಹಲಗಳಿಗೆ ತೆರೆ ಬೀಳಲಿದೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ನೀಡಿರುವ ಹೇಳಿಕೆ ರಾಜಕೀಯ ವಲಯದಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಒಟ್ಟಾರೆ, ಸಿಎಂಗೆ ಬಂದಿರುವ ದೆಹಲಿ ಬುಲಾವ್ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಸಿದ್ದು, ಮುಂದಿನ ರಾಜಕೀಯ ಬೆಳವಣಿಗೆಗಳತ್ತ ಎಲ್ಲರ ಗಮನ ನೆಟ್ಟಿದೆ.

RELATED ARTICLES
- Advertisment -
Google search engine

Most Popular