ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನ ಹೊಂದಿ ಇಂದಿಗೆ ನಾಲ್ಕು ವರ್ಷಗಳೇ ಕಳೆದು ಹೋಗಿದ್ದು ಇಂದು 4ನೇ ವರ್ಷದ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಕುಟುಂಬಸ್ಥರು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.
ಕಂಠೀರವ ಸ್ಟುಡಿಯೋದಲ್ಲಿರುವ ನಟ ಪುನೀತ್ ರಾಜ್ ಕುಮಾರ್ ಸಮಾಧಿಗೆ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ದಂಪತಿ ಭೇಟಿ ನೀಡಿದ್ದು ಸಮಾಧಿಗೆ ಪೂಜೆ ಸಲ್ಲಿಕೆ ಮಾಡಿದ್ದಾರೆ.
ಕಂಠೀರವ ಸ್ಟುಡಿಯೋ ಬಳಿಗೆ ನಟ ಪುನೀತ್ ರಾಜ್ ಕುಮಾರ್ ಅವರ ಸಾವಿರಾರು ಅಭಿಮಾನಿಗಳು ಲಗ್ಗೆ ಇಡುತ್ತಿದ್ದಾರೆ. ಅಕ್ಟೋಬರ್ 29 2021ರಲ್ಲಿ ನಟ ಪುನೀತ್ ರಾಜ್ ಕುಮಾರ್ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದರು.



