ಕನ್ನಡ ಚಿತ್ರರಂಗಕ್ಕೆ ಈಗಾಗಲೇ ಮುಂಬೈನ ಅನೇಕ ನಟಿಯರು ಎಂಟ್ರಿಕೊಟ್ಟಿದ್ದಾರೆ. ಈಗ ಈ ಸಾಲಿಗೆ ಹೊ ಸೇರ್ಪಡೆ ಪ್ರಾಚಿ ಶರ್ಮ. “ರೆಡ್ರಮ್’ ಎಂಬ ಚಿತ್ರದ ಮೂಲಕ ಪ್ರಾಚಿ ಶರ್ಮ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ.
ತೆಲುಗು ಚಿತ್ರ “ಜಿಲ್ಲಾ ಪರಿಷತ್ ಉನ್ನತ ಪಾಠಶಾಲಾ’ ಮೂಲಕ ಬಣ್ಣ ಹಚ್ಚಿದ ಅನುಭವವಿರುವ ಪ್ರಾಚಿ ಶರ್ಮ, ಈಗ ಕೌಟಿಲ್ಯ ಸಿನಿಮಾಸ್ ಹಾಗೂ ಹನಿ ಚೌಧರಿ ನಿರ್ಮಾಣದ “ರೆಡ್ರಮ್’ ಚಿತ್ರದ ಮುಖಾಂತರ ಕನ್ನಡ ಚಿತ್ರರಂಗ ಪ್ರವೇಶಿಸಿದ್ದಾರೆ. ಕನ್ನಡ ಭಾಷೆಯನ್ನು ಬೇಗ ಕಲಿಯುತ್ತಿರುವ ಪ್ರಾಚಿ ಶರ್ಮ, “ಸ್ವಾತಿ ನಕ್ಷತ್ರ’ ಎಂಬ ಮತ್ತೂಂದು ಚಿತ್ರವನ್ನು ಒಪ್ಪಿಕೊಂಡಿದ್ದಾರೆ. ಈ ಚಿತ್ರದ ಚಿತ್ರೀಕರಣ ಜುಲೈನಲ್ಲಿ ಆರಂಭವಾಗಲಿದೆ.
ಇದಲ್ಲದೆ ಇನ್ನೊಂದು ಹೆಸರಿಡದ ಬಹು ತಾರಾಗಣದ, ದೊಡ್ಡ ಬಜೆಟ್ ನ ಚಿತ್ರಕ್ಕೆ ಕೂಡ ಆಯ್ಕೆ ಆಗಿದ್ದಾರಂತೆ. ಇದರ ಜೊತೆಗೆ ಇನ್ನೂ ಅನೇಕ ಚಿತ್ರಗಳ ಜೊತೆಯೂ ಮಾತುಕತೆ ನಡೆಯುತ್ತಿದೆಯಂತೆ.