Sunday, April 20, 2025
Google search engine

HomeUncategorizedವೈಜ್ಞಾನಿಕ ರೀತಿಯಲ್ಲಿ ಕೈತೊಳೆಯುವ ಅಭ್ಯಾಸ ಮಾಡಿಕೊಳ್ಳಿ: ಚಿಕ್ಕಸುಬ್ಬಯ್ಯ

ವೈಜ್ಞಾನಿಕ ರೀತಿಯಲ್ಲಿ ಕೈತೊಳೆಯುವ ಅಭ್ಯಾಸ ಮಾಡಿಕೊಳ್ಳಿ: ಚಿಕ್ಕಸುಬ್ಬಯ್ಯ

ರಾಮನಗರ: ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಚಿಕ್ಕಸುಬ್ಬಯ್ಯ ಅವರು ತಿಳಿಸಿದರು. ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸ್ವಚ್ಛ ಭಾರತ್ ಮಿಷಿನ್ ಗ್ರಾಮೀಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ರಾಮನಗರ ಜಿಲ್ಲಾ ಪಂಚಾಯತ್ ಆವರಣದಲ್ಲಿ ವಿಶ್ವ ಕೈ ತೊಳೆಯುವ ದಿನದ ಅಂಗವಾಗಿಆಯೋಜಿಸಲಾಗಿದ್ದ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಊಟಕ್ಕೂ ಮುನ್ನ ಶೌಚಾಯಲದ ಬಳಕೆ ನಂತರ ಕೈಗಳ ಸ್ವಚ್ಛತೆ ಕಾಪಾಡಿಕೊಳ್ಳುವುದರಿಂದ ಅನೇಕ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸಲು ಸಾಧ್ಯ ಆದ್ದರಿಂದ ಎಲ್ಲರೂ ಜಾಗೃತರಾಗಿ ವೈಜ್ಞಾನಿಕ ರೀತಿಯಲ್ಲಿ ಕೈತೊಳೆಯುವ ಅಭ್ಯಾಸ ಮಾಡಿಕೊಳ್ಳುವಂತೆ ತಿಳಿಸಿದರು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಎಸ್. ಗಂಗಾಧರ್ ಅವರು ಮಾತನಾಡಿ, ವಿಶ್ವ ಕೈ ತೊಳೆಯುವ ದಿನದ ಅಂಗವಾಗಿ ಜಿಲ್ಲೆಯಾದ್ಯಂತ ಮನೆ, ಶಾಲಾ-ಕಾಲೇಜುಗಳು, ಕೆಲಸದ ಸ್ಥಳ, ಪ್ರಯಾಣದವೇಳೆ ಹಾಗೂ ಇತರೆ ಸ್ಥಳಗಳಲ್ಲಿ ಜಾಗೃತಿ ಮೂಡಿಸಲಾಗುತ್ತಿದ್ದು ಇದರ ಮುಖ್ಯ ಉದ್ದೇಶ ಕೈತೊಳೆಯುವುದರಿಂದ ಸಾಂಕ್ರಾಮಿಕ ರೋಗಗಳು ಮತ್ತು ಇತರೆ ಸೋಂಕು ಹರಡದಂತೆ ಜನ ಸಾಮಾನ್ಯರಲ್ಲಿ ಅರಿವು ಮೂಡಿಸುವುದು ಮತ್ತು ಪ್ರತಿಯೊಬ್ಬರು ಆಹಾರಸೇವನೆ, ಆಹಾರ ತಯಾರಿಸುವಾಗ, ಶಿಶುಗಳನ್ನು ಮುಟ್ಟುವಾಗ, ಕಣ್ಣು, ಬಾಯಿ, ಮುಖವನ್ನು ಸ್ಪರ್ಶಿಸುವ ಮುನ್ನ ಕೈಗಳನ್ನು ಸ್ವಚ್ಛಗೊಳಿಸಬೇಕು ಎಂದರು.

ಕೆಮ್ಮು ಮತ್ತು ಸೀನಿದಾಗ, ರೋಗಿಗಳನ್ನು ಭೇಟಿಯಾದಾಗ, ಶೌಚಾಲಯಗಳನ್ನು ಬಳಸಿದಾಗ, ಕಸ ಮತ್ತು ತ್ಯಾಜ್ಯಗಳನ್ನು ಸ್ಪರ್ಶಿಸಿದಾಗ ಹಾಗೂ ಹೊರಗಿನಿಂದ ಮನೆಗೆ ಬಂದ ನಂತರ ಕೈಗಳನ್ನು ತೊಳೆದುಕೊಳ್ಳುವುದರಿಂದ ಅತೀಸಾರ, ಉಸಿರಾಟಕ್ಕೆ ಸಂಬಂಧಿಸಿದ ಸೋಂಕು, ಕಾಲರ, ಎಬೋಲಾ, ಜಾಂಡೀಸ್, ವಾಂತಿ-ಬೇದಿ, ಕೋವಿಡ್, ನ್ಯೂಮೋನಿಯ ಮತ್ತು ಕ್ಷಯರೋಗದಂತಹ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸಲು ಸಾಧ್ಯ ಆದ್ದರಿಂದ ಮನುಷ್ಯನ ಜೀವನದಲ್ಲಿ ಉತ್ತಮ ಆರೋಗ್ಯ ಪಡೆಯಬೇಕಾದರೆ ಕೈಗಳ ಸ್ವಚ್ಛತೆ ಮುಖ್ಯವೆಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಕಾರ್ಯಪಾಲಕ ಅಭಿಯಂತರರಾದ ರಂಗಸ್ವಾಮಿ, ವ್ಯವಸ್ಥಾಪಕ ನಾಗರಾಜು, ಸಹಾಯಕ ಕಾರ್ಯದರ್ಶಿ ಜಯಪಾಲ್‌ರೆಡ್ಡಿ, ಸ್ವಚ್ಛ ಭಾರತ್ ಮಿಷನ್ ಜಿಲ್ಲಾ ಸಂಯೋಜಕರಾದ ಸೀನಪ್ಪ, ಯೂರೂಬ್‌ರೆಡ್ಡಿ, ಎನ್.ಆರ್.ಎಲ್.ಎಂ, ಸ್ವಚ್ಛ ಭಾರತ್ ಮಿಷನ್ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಹಾಜರಿದ್ದರು.

RELATED ARTICLES
- Advertisment -
Google search engine

Most Popular