ಬೆಂಗಳೂರು: ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠರಾದ ಹೆಚ್.ಡಿ. ದೇವೇಗೌಡರವರ ಆರೋಗ್ಯ ಸ್ಥಿತಿಯನ್ನು ಕುರಿತು ಇಂದು ಹಲವು ಗಣ್ಯರು ಆಸ್ಪತ್ರೆಯಲ್ಲಿ ಭೇಟಿಯಾಗಿ ವಿಚಾರಿಸಿದರು. ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ ಹಾಗೂ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ದೇವೇಗೌಡರ ಆರೋಗ್ಯ ವಿಚಾರಿಸಿದರು.
ಇವರ ಜೊತೆ ಶಾಸಕ ಶರಣಗೌಡ ಕಂದಕೂರ ಕೂಡ ಹಾಜರಿದ್ದರು. ದೇವೇಗೌಡರನ್ನು ಭೇಟಿ ಮಾಡಿದ ಅವರು ವೈದ್ಯಕೀಯ ತಂಡದಿಂದ ಆರೋಗ್ಯ ಸ್ಥಿತಿಯ ಕುರಿತು ಮಾಹಿತಿ ಪಡೆದರು ಮತ್ತು ಅವರ ಚೇತರಿಕೆಗೆ ಶುಭಾಶಯ ಕೋರಿದರು.
ಇತ್ತೀಚೆಗೆ ದೇವೇಗೌಡರಿಗೆ ತೀವ್ರ ಅಸ್ವಸ್ಥತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿರುವುದಾಗಿ ವೈದ್ಯರು ತಿಳಿಸಿದ್ದಾರೆ.