Saturday, April 19, 2025
Google search engine

Homeರಾಜ್ಯಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್: ಮೌನ ಮುರಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್: ಮೌನ ಮುರಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೆಡಿಎಸ್ ವರಿಷ್ಠ ಹೆಚ್‌ಡಿ ದೇವೇಗೌಡ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ೯೧ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪ್ರಜ್ವಲ್ ವಿರುದ್ಧ ಕ್ರಮ ತೆಗೆದುಕೊಳ್ಳುವುದರ ಬಗ್ಗೆ ತಕರಾರು ಇಲ್ಲ. ಆದರೆ ರೇವಣ್ಣ ವಿರುದ್ಧ ಆರೋಪ ಮಾಡಿರುವುದರ ಸತ್ಯ ಜನರಿಗೆ ಗೊತ್ತಿದೆ. ರೇವಣ್ಣ ಪ್ರಕರಣದ ಬಗ್ಗೆ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ಅದರ ಬಗ್ಗೆ ನಾನು ಪ್ರತಿಕ್ರಿಯೆ ಕೊಡುವುದಿಲ್ಲ. ಹಾಸನ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ಹೊರಗಡೆ ಹೋಗಿದ್ದಾರೆ ಎಂದರು.

ಈ ಘಟನೆ ಬಗ್ಗೆ ಕುಟುಂಬದ ಪರವಾಗಿ ಹೆಚ್?ಡಿ ಕುಮಾರಸ್ವಾಮಿ ಮಾತನಾಡಿದ್ದಾರೆ. ಕ್ರಮ ಕೈಗೊಳ್ಳುವುದು ಸರ್ಕಾರದ ಜವಾಬ್ದಾರಿ ಎಂದು ಹೇಳಿದ್ದಾರೆ. ಇದರಲ್ಲಿ ಅನೇಕ ಜನರಿದ್ದಾರೆ, ಅವರ ಹೆಸರನ್ನು ಹೇಳಲು ಹೋಗಲ್ಲ. ಅನ್ಯಾಯಕ್ಕೆ ಒಳಗಾಗಿರುವ ಸಂತ್ರಸ್ತೆಯರಿಗೆ ಪರಿಹಾರ ನೀಡಬೇಕು. ಈ ಎಲ್ಲ ವಿಚಾರಗಳನ್ನು ಕುಮಾರಸ್ವಾಮಿ ಬಿಡಿಸಿ ಬಿಡಿಸಿ ಹೇಳಿದ್ದಾರೆ. ಇದು ಯಾವ ರೀತಿ ನಡೆಯಿತು ಎಂದು ನಾನು ವಿಶ್ಲೇಷಣೆ ಮಾಡಲ್ಲ ಎಂದು ದೇವೇಗೌಡ ಹೇಳಿದರು.

ಡಿಸಿಎಂ ಡಿಕೆ ಶಿವಕುಮಾರ್ ೧೦೦ ಕೋಟಿ ಆಫರ್ ಮಾಡಿದ್ದರು ಎಂಬ ದೇವರಾಜೇಗೌಡ ಹೇಳಿಕೆಗೆ ನಾನು ಪ್ರತಿಕ್ರಿಯೆ ಕೊಡುವುದಿಲ್ಲ ಎಂದೂ ಅವರು ಹೇಳಿದರು.

RELATED ARTICLES
- Advertisment -
Google search engine

Most Popular