Wednesday, April 23, 2025
Google search engine

Homeರಾಜಕೀಯಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ: ಎಸ್ ​​ಐಟಿ ಅಧಿಕಾರಿಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ- ಡಾ ಪರಮೇಶ್ವರ್

ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ: ಎಸ್ ​​ಐಟಿ ಅಧಿಕಾರಿಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ- ಡಾ ಪರಮೇಶ್ವರ್

ಬೆಂಗಳೂರು: ಹಾಸನ ಹಾಲಿ ಸಂಸದ ಪ್ರಜ್ವಲ್​ ರೇವಣ್ಣ ಮತ್ತು ಮಾಜಿ ಸಚಿವ ಹಾಗೂ ಹಾಲಿ ಶಾಸಕ ಹೆಚ್​ಡಿ ರೇವಣ್ಣ ವಿರುದ್ಧ ಕೇಳಿಬಂದಿರುವ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಯಾರ ವಿರುದ್ಧವಾಗಿದ್ದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿದ್ದಾರೆ.

ಹೆಚ್ ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ಧ ಈಗಾಗಲೇ ದೂರು ದಾಖಲಾಗಿದ್ದು, ದೂರುದಾರರು ಯಾರ ಹೆಸರು ಉಲ್ಲೇಖಿಸಿದ್ದಾರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಸಂತ್ರಸ್ತರಿಗೆ ಭಯ ಹುಟ್ಟಿಸಿದರೆ ಅವರಿಗೆ ನಾವು ಸರ್ಕಾರ ವತಿಯಿಂದ ಭದ್ರತೆ ನೀಡುತ್ತೇವೆ ಎಂದರು.

ಪ್ರಕರಣದ ತನಿಖೆಯನ್ನು ಎಸ್​ಐಟಿಗೆ ವಹಿಸಿದ್ದೇವೆ. ತನಿಖಾ ತಂಡದಲ್ಲಿ ಎಸ್ ​ಪಿ ಮಟ್ಟದ ಅಧಿಕಾರಿಗಳು ಇದ್ದಾರೆ. ಎಸ್ ​​ಐಟಿ ಅಧಿಕಾರಿಗಳ ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು. ಅಧಿಕಾರಿಗಳು ಪೆನ್​ಡ್ರೈವ್, ಸಾಕ್ಷಿ ಎಲ್ಲವನ್ನೂ ಕಲೆ ಹಾಕುತ್ತಿದ್ದಾರೆ. ವಿದೇಶದಿಂದ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ವಾಪಸ್ ಕರೆಸಿಕೊಳ್ಳುತ್ತೇವೆ. ಎಸ್ ​​ಐಟಿ ಅಧಿಕಾರಿಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಎಲ್ಲ ವಿಡಿಯೋಗಳನ್ನು ಎಫ್ ​ಎಸ್​ ಎಲ್​​ಗೆ ಕಳುಹಿಸುತ್ತೇವೆ ಎಂದು ಹೇಳಿದರು.

RELATED ARTICLES
- Advertisment -
Google search engine

Most Popular