ಹಾಸನ : ಪೆನ್‌ಡ್ರೈವ್ ಪ್ರಕರಣದ ಆರೋಪಿ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರು ಜರ್ಮನಿಯಿಂದ ಬೆಂಗಳೂರಿಗೆ ವಾಪಸ್ ಆಗಲು ವಿಮಾನಜ ಟಿಕೆಟ್ ಬುಕ್ ಮಾಡಿದ್ದಾರೆ. ಲುಫ್ತಾನ್ಸಾ ಏರ್‌ಲೈನ್ಸ್‌ನಲ್ಲಿ ಬ್ಯುಸಿನೆಸ್ ಕ್ಲಾಸ್ ಟಿಕೆಟ್ ಬುಕ್ ಮಾಡಿಕೊಂಡಿರುವ ಪ್ರಜ್ವಲ್ ರೇವಣ್ಣ, ಮೇ ೩೧ರಂದು ಜರ್ಮನಿಯ ಮ್ಯೂನಿಚ್‌ನಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ.
ಮೇ ೩೧ರ ಬೆಳಗ್ಗೆ ೧೦:೩೦ಕ್ಕೆ ಎಸ್‌ಐಟಿ ಮುಂದೆ ವಿಚಾರಣೆಗೆ ಹಾಜರಾಗುವೆ ಎಂದು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದರು. ಅದರಂತೆ ಮೇ ೩೧ರಂದು ಬೆಂಗಳೂರಿಗೆ ಬಂದಿಳಿಯಲಿದ್ದಾರೆ. ಆದ್ರೆ, ಪ್ರಜ್ವಲ್ ರೇವಣ್ಣ ಆಗಮಿಸುವ ವಿಮಾನ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಮೇ ೩೧ರ ಮಧ್ಯರಾತ್ರಿ ೧೨:೩೦ಕ್ಕೆ ಬಂದಿಳಿಯಲಿದೆ.
ಹೀಗಾಗಿ ಪ್ರಜ್ವಲ್ ಆ ಸಮಯದಲ್ಲಿ ವಿಚಾರಣೆಗೆ ಹಾಜರಾಗುವುದಿಲ್ಲ. ಬದಲಿಗೆ ಜೂನ್ ೧ಕ್ಕೆ ವಿಚಾರಣೆಗೆ ಹಾಜರಾಗಹುದು.