ಮಂಡ್ಯ: ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯದಲ್ಲಿ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ ಮುದುವರೆದಿದೆ.
ಕೆ.ಆರ್.ಪೇಟೆ ಪಟ್ಟಣದ ಐಬಿ ವೃತ್ತದಲ್ಲಿ ಮೈಸೂರು – ಚನ್ನರಾಯಪಟ್ಟಣ ಹೆದ್ದಾರಿ ತಡೆದು ಜೆಡಿಎಸ್ ಕಾರ್ಯಕರ್ತರು ಪ್ರತಿಭಟಿಸಿದ್ದಾರೆ.

ಕೆ.ಆರ್.ಪೇಟೆ ಶಾಸಕ ಎಚ್.ಟಿ.ಮಂಜು ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದು, ಪ್ರಕರಣದಲ್ಲಿ ಪೆನ್ ಡ್ರೈವ್ ಹಂಚಿಕೆ ಕೈವಾಡ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ವಿರುದ್ಧ ಅಸಮಧಾನ ಹೊರಹಾಕಿದ್ದಾರೆ.
ಸಚಿವ ಸಂಪುಟದಿಂದ ಡಿ ಕೆ ಶಿವಕುಮಾರ್ ಅವರನ್ನು ಕೈಬಿಡಬೇಕು. ಪ್ರಕರಣದಲ್ಲಿ ಸಾವಿರಾರು ಮಹಿಳೆಯ ಮಾನಹಾನಿ ಮಾಡಿರುವ ಪ್ರಕರಣದಲ್ಲಿ ಬಂಧಿಸಿ ಶಿಕ್ಷೆ ನೀಡಬೇಕೆಂದು ಒತ್ತಾಯ ಮಾಡಲಾಗಿದೆ.
ಇದೇ ಸಂದರ್ಭದಲ್ಲಿ ಡಿಕೆಶಿ ಪ್ರತಿಕೃತಿ ದಹಿಸಿ ಜೆಡಿಎಸ್ ಕಾರ್ಯಕರ್ತರ ಆಕ್ರೋಶ ಹೊರಹಾಕಿದ್ದಾರೆ.