Wednesday, April 23, 2025
Google search engine

Homeರಾಜಕೀಯಪ್ರಜ್ವಲ್‌ ರೇವಣ್ಣ ಪೆನ್ ಡ್ರೈವ್ ಪ್ರಕರಣ: ಪಕ್ಷದಿಂದ ಅಮಾನತುಗೊಳಿಸುವಂತೆ ಜೆಡಿಎಸ್​ ಶಾಸಕ ಒತ್ತಾಯ

ಪ್ರಜ್ವಲ್‌ ರೇವಣ್ಣ ಪೆನ್ ಡ್ರೈವ್ ಪ್ರಕರಣ: ಪಕ್ಷದಿಂದ ಅಮಾನತುಗೊಳಿಸುವಂತೆ ಜೆಡಿಎಸ್​ ಶಾಸಕ ಒತ್ತಾಯ

ಬೆಂಗಳೂರು: ಹಾಸನ ಸಂಸದ, ಲೋಕಸಭೆ ಚುನಾವಣೆಯಲ್ಲಿ ಎನ್​ ಡಿಎ ಅಭ್ಯರ್ಥಿಯಾಗಿರುವ ಪ್ರಜ್ವಲ್ ರೇವಣ್ಣ  ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಜೆಡಿಎಸ್​ ಶಾಸಕ ಶರಣಗೌಡ ಕಂದಕೂರು ಮಾಜಿ ಪ್ರಧಾನಿ ಹೆಚ್ ​ಡಿ ದೇವೇಗೌಡರಿಗೆ ಪತ್ರ ಬರೆದು, ಪ್ರಜ್ವಲ್ ರೇವಣ್ಣರನ್ನು ಪಕ್ಷದಿಂದ ಅಮಾನತುಗೊಳಿಸುವಂತೆ ಆಗ್ರಹಿಸಿದ್ದಾರೆ.

ಕೆಲ ದಿನಗಳಿಂದ ಹರದಾಡುತ್ತಿರುವ ವಿಡಿಯೋದಿಂದ ಮುಜುಗರವಾಗಿದೆ. ಈ ವಿಡಿಯೋಗಳಲ್ಲಿ ಪ್ರಜ್ವಲ್ ರೇವಣ್ಣ ಕಾಣಿಸಿಕೊಂಡಿದ್ದಾರೆ. ಮೇಲ್ನೋಟಕ್ಕೆ ಪ್ರಜ್ವಲ್ ತಪ್ಪಿತಸ್ಥರು ಎಂಬ ಭಾವನೆ ಉಂಟಾಗಿದೆ. ದೇವೇಗೌಡರು, ಹೆಚ್ ​ಡಿ ಕುಮಾರಸ್ವಾಮಿ ಅವರು ಹೆಣ್ಣು ಮಕ್ಕಳಿಗೆ ಗೌರವ ನೀಡುತ್ತಾ ಬಂದಿದ್ದಾರೆ. ಹೆಚ್​ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಲಾಟರಿ ನಿಷೇಧ ಮಾಡಿದ್ದರು. ಲಾಟರಿ ನಿಷೇಧಿಸಿ ಹೆಣ್ಣು ಮಕ್ಕಳ ಪುಣ್ಯಕ್ಕೆ ಪಾತ್ರರಾಗಿದ್ದಾರೆ. ಪಕ್ಷದ ಚಿಹ್ನೆಯಲ್ಲಿ ಭತ್ತದ ತೆನೆಹೊತ್ತ ಮಹಿಳೆಯ ಚಿತ್ರ ಇದೆ. ಭತ್ತದ ತೆನೆಹೊತ್ತ ಮಹಿಳೆಯ ಚಿತ್ರ ಹೆಣ್ಣಿನ ಗೌರವವನ್ನ ಪ್ರತಿಪಾದಿಸುತ್ತೆ. ಇಂತಹ ಪರಂಪರೆ ಹೊಂದಿರುವ ಪಕ್ಷಕ್ಕೆ ಮುಜುಗರ ತಂದಿರುವುದು ಸುಳ್ಳಲ್ಲ. ಹೀಗಾಗಿ ಪ್ರಜ್ವಲ್ ರೇವಣ್ಣರನ್ನು ಕೂಡಲೇ ಅಮಾನತು ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ರಾಜ್ಯ ಸರ್ಕಾರ ಪ್ರಕರಣದ ತನಿಖೆ ನಡೆಸಲು ಎಸ್​ಐಟಿ ರಚಿಸಿದೆ. ಪಕ್ಷ ಕೂಡ ಆಂತರಿಕ ಸಮಿತಿ ರಚನೆ ಮಾಡಿ ಸತ್ಯಾಸತ್ಯ ತಿಳಿಸಬೇಕು.ಈ ಪ್ರಕರಣದಿಂದ ಸದ್ಯ ಜೆಡಿಎಸ್​​​ ಪಕ್ಷಕ್ಕೆ ಮುಜುಗರ ಆಗುತ್ತಿದೆ. ಪಕ್ಷದ ಮುಜುಗರ ತಪ್ಪಿಸಲು ಪ್ರಜ್ವಲ್​ರನ್ನ​ ಅಮಾನತುಗೊಳಿಸಬೇಕು ಎಂದು ಪತ್ರದ ಮೂಲಕ ಒತ್ತಾಯಿಸಿದ್ದಾರೆ.

ಬಂಧನಕ್ಕೆ ಒತ್ತಾಯ

ಹಾಸನ ಜಿಲ್ಲೆಯ ಹಲವು ಮಹಿಳೆಯರ ಜೊತೆಗಿನ ಅಶ್ಲೀಲ ವೀಡಿಯೋ ಚಿತ್ರೀಕರಿಸಿದ ಪ್ರಭಾವಿ ವ್ಯಕ್ತಿಯನ್ನು ಬಂಧಿಸುವಂತೆ ಹಾಸನ ಜಿಲ್ಲಾ ಜನಪರ ಚಳುವಳಿಗಳ ಒಕ್ಕೂಟ ಆಗ್ರಹಿಸಿದೆ. ಅಲ್ಲದೆ ಪೆನ್​​ಡ್ರೈವ್ ಮೂಲಕ ಮಹಿಳೆಯರ ಅಶ್ಲೀಲ ವೀಡಿಯೋ ಹಂಚಿ ಅವರ ಖಾಸಗಿ ಜೀವನಕ್ಕೆ ಧಕ್ಕೆ ತಂದವರ ವಿರುದ್ಧವೂ ಕಠಿಣ ಕ್ರಮಕ್ಕೆ ಆಗ್ರಹಿಸಿ ವಿವಿಧ ರೈತಪರ ಸಂಘಟನೆಗಳು, ಜನಪರ, ದಲಿತ, ಮಹಿಳಾ ಸಂಘಟನೆಗಳು ಇಂದು ಪ್ರತಿಭಟನೆ ನಡೆಸಲಿವೆ.

RELATED ARTICLES
- Advertisment -
Google search engine

Most Popular