Sunday, April 20, 2025
Google search engine

Homeರಾಜಕೀಯಮೇ ೭ರ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ!

ಮೇ ೭ರ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ!

ಬೆಂಗಳೂರು: ಚುನಾವಣೆ ಹೊತ್ತಲ್ಲಿ ದೇಶಾದ್ಯಂತ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಕೇಸ್ ಭಾರಿ ಸದ್ದು ಮಾಡುತ್ತಿದೆ. ಕಾಂಗ್ರೆಸ್ ಇದನ್ನೇ ಅಸ್ತ್ರ ಮಾಡಿಕೊಂಡು ಬಿಜೆಪಿ, ಜೆಡಿಎಸ್ ಮೈತ್ರಿಯನ್ನು ಟೀಕಿಸುತ್ತಿದೆ. ರಾಷ್ಟ್ರ ನಾಯಕರೂ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಲು ಪ್ರಜ್ವಲ್ ಕೇಸ್ ಅನ್ನೇ ದಾಳ ಮಾಡಿಕೊಂಡಿದ್ದಾರೆ. ಈ ಮಧ್ಯೆ ಮೇ ೭ರಂದು ಮತದಾನ ಮುಗಿದ ನಂತರ ಪ್ರಜ್ವಲ್ ಭಾರತಕ್ಕೆ ವಾಪಸಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಮುಗಿದ ದಿನವೇ, ಅಂದರೆ ಏಪ್ರಿಲ್ ೨೬ರ ಮಧ್ಯರಾತ್ರಿಯೇ ಪ್ರಜ್ವಲ್ ದೇಶ ಬಿಟ್ಟು ಹೊರದೇಶಕ್ಕೆ ಹೋಗಿ ತಲೆಮರೆಸಿಕೊಂಡಿದ್ದರು. ಮೇ ೫ರಂದೇ ಪ್ರಜ್ವಲ್ ಬೆಂಗಳೂರಿಗೆ ಆಗಮಿಸುವ ಪುಕಾರು ಹಬ್ಬಿತ್ತು. ಬೆಂಗಳೂರು, ಮಂಗಳೂರು, ಗೋವಾ ಅಥವಾ ಕೊಚ್ಚಿ ಏರ್‌ಪೋರ್ಟ್‌ಗಳಲ್ಲಿ ಎಸ್‌ಐಟಿ ಅಧಿಕಾರಿಗಳು ಕಾದು ಕುಳಿತಿದ್ದರು. ಆದ್ರೆ ಪ್ರಜ್ವಲ್ ಬರಲೇ ಇಲ್ಲ. ಸದ್ಯ ಬಂದಿರುವ ಮಾಹಿತಿ ಪ್ರಕಾರ ಚುನಾವಣೆ ಬಳಿಕ, ಅಂದರೆ ಮೇ ೭ರ ನಂತ್ರ ಬರುವ ಸಾಧ್ಯತೆ ಇದೆ ಎನ್ನಲಾಗಿದೆ. ೨ನೇ ಹಂತದ ಮತದಾನ ಬಳಿಕ ಪ್ರಜ್ವಲ್ ಶರಣಾಗತಿಯಾಗುವ ಸಾಧ್ಯತೆಯೂ ಇದೆ. ಈ ಮಧ್ಯೆ ಬ್ಲೂ ಕಾರ್ನರ್ ನೋಟಿಸ್ ಹೊರಡಿಸಲು ಸಿಬಿಐಗೆ ವಿಶೇಷ ತನಿಖಾ ತಂಡದ ಅಧಿಕಾರಿಗಳು ಮನವಿ ಮಾಡಿದ್ದಾರೆ. ಪ್ರಜ್ವಲ್‌ಗೆ ನೋಟಿಸ್ ನೀಡಲು ಮಹಿಳಾ ಆಯೋಗವೂ ಸಿದ್ಧತೆ ನಡೆಸಿದೆ.

ಪ್ರಜ್ವಲ್ ಲೈಂಗಿಕ ದೌರ್ಜನ್ಯ ಕೇಸ್‌ನಿಂದ ಮುಜುಗರಕ್ಕೀಡಾಗಿರುವ ಕುಟುಂಬದವರು ವಿಚಾರಣೆಗೆ ಹಾಜರಾಗುವಂತೆ ಸಂಸದ ಪ್ರಜ್ವಲ್ ಮೇಲೆ ಒತ್ತಡ ಹಾಕಿದ್ದಾರೆ ಎನ್ನಲಾಗಿದೆ. ವಿಡಿಯೋ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ವಿಚಾರಣೆಗೆ ಹಾಜರಾಗದೇ ವಿದೇಶದಲ್ಲಿ ಇರುವುದು ಬೇಡ ಎಂದು ಸಲಹೆ ನೀಡಿದ್ದಾರೆ. ಇದ್ರಿಂದ ಕುಟುಂಬ, ಪಕ್ಷಕ್ಕೆ ಮುಜುಗರ ಉಂಟು ಆಗ್ತಿದೆ. ಮೊದಲು ಎಸ್?ಐಟಿ ಮುಂದೆ ಹಾಜರಾಗಿ ವಿಚಾರಣೆ ಎದುರಿಸು. ಕಾನೂನು ಹೋರಾಟದಿಂದ ಸತ್ಯಾಂಶ ಹೊರಬರುತ್ತದೆ. ವಿಚಾರಣೆಗೆ ಹಾಜರಾಗದೇ ಕಾನೂನು ಹೋರಾಟಕ್ಕೆ ಮೊರೆ ಹೋದ್ರೆ ಮತ್ತಷ್ಟು ಸಮಸ್ಯೆಯಾಗುತ್ತದೆ. ಈಗಾಗಲೇ ಈ ಪ್ರಕರಣದಿಂದ ಸಾಕಷ್ಟು ಡ್ಯಾಮೇಜ್ ಆಗ್ತಿದೆ. ಕೂಡಲೇ ವಕೀಲರ ಜತೆ ಚರ್ಚಿಸಿ ವಿಚಾರಣೆಗೆ ಹಾಜರಾಗು ಎಂದು ಕುಟುಂಬದವರು ಸಲಹೆ ನೀಡಿದ್ದಾರೆ ಎನ್ನಲಾಗಿದೆ.

RELATED ARTICLES
- Advertisment -
Google search engine

Most Popular