Monday, April 21, 2025
Google search engine

Homeರಾಜ್ಯಸುದ್ದಿಜಾಲಹಾಸನ ಕ್ಷೇತ್ರದಿಂದ ಪ್ರಜ್ವಲ್ ಗೆಲ್ಲುತ್ತಾನೆ: ಸೂರಜ್ ರೇವಣ್ಣ

ಹಾಸನ ಕ್ಷೇತ್ರದಿಂದ ಪ್ರಜ್ವಲ್ ಗೆಲ್ಲುತ್ತಾನೆ: ಸೂರಜ್ ರೇವಣ್ಣ

ಹಾಸನ: ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರಲ್ಲಿ ಯಾವುದೇ ರೀತಿಯ ಗೊಂದಲಗಳಿಲ್ಲ ಎಂದಿನಂತೆ ಕಾರ್ಯಕರ್ತರ ಸಭೆ ನಡೆಯುತ್ತಿವೆ ಮತ್ತು ಚುನಾವಣೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚೆಯಾಗುತ್ತದೆ, ಆರೋಪಗಳೇನೆ ಇರಲಿ, ಪ್ರಜ್ವಲ್ ಗೆದ್ದೇ ಗೆಲ್ಲುತ್ತಾನೆ ಎಂದು ಅವರ ಸಹೋದರ ಮತ್ತು ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಹೇಳಿದರು.

ಇಂದು ಗುರುರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು ಪಜ್ವಲ್ ಬಗ್ಗೆ ಮಾತಾಡಲ್ಲ, ಸರ್ಕಾರ ರಚಿಸಿರುವ ಎಸ್‌ಐಟಿ ಪ್ರಕರಣದ ತನಿಖೆ ನಡೆಸುತ್ತಿದೆ, ಆದರೆ ಇದೊಂದು ಷಡ್ಯಂತ್ರ ಅಂತ ಹೇಳಬಲ್ಲೆ, ಕಳೆದ ಕೆಲ ದಶಕಗಳಿಂದ ಹೆಚ್ ಡಿ ರೇವಣ್ಣ ಅವರು ಈ ಭಾಗದ ಅತ್ಯಂತ ಜನಪ್ರಿಯ ನಾಯಕರಾಗಿದ್ದಾರೆ, ಅದನ್ನು ಸಹಿಸದ ಜನ ಇಂಥದನ್ನೆಲ್ಲ ಮಾಡುತ್ತಿದ್ದಾರೆ ಎಂದು ಸೂರಜ್ ಹೇಳಿದರು. ತನಿಖೆ ಪೂರ್ಣಗೊಂಡ ಬಳಿಕ ಸತ್ಯಾಸತ್ಯತೆ ನಾಡಿನ ಜನರಿಗೆ ಗೊತ್ತಾಗಲಿದೆ ಎಂದು ಅವರು ಹೇಳಿದರು. ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ತಾನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದು ನಿಜ ಅದರೆ ಅದು ಜನವರಿಯಲ್ಲಿ, ಕಳೆದ ಒಂದೂವರೆ ತಿಂಗಳಿಂದ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದರಿಂದ ಬೆಂಗಳೂರಿಗೆ ಹೋಗಲು ಕೂಡ ಸಾಧ್ಯವಾಗಿಲ್ಲ ಎಂದು ಸೂರಜ್ ರೇವಣ್ಣ ಹೇಳಿದರು.

RELATED ARTICLES
- Advertisment -
Google search engine

Most Popular