Wednesday, April 9, 2025
Google search engine

Homeಸ್ಥಳೀಯಪ್ರತಾಪ್ ಸಿಂಹರನ್ನ ತನಿಖೆಗೆ ಒಳಪಡಿಸಬೇಕು: ರಫತ್ ಖಾನ್ ಆಗ್ರಹ

ಪ್ರತಾಪ್ ಸಿಂಹರನ್ನ ತನಿಖೆಗೆ ಒಳಪಡಿಸಬೇಕು: ರಫತ್ ಖಾನ್ ಆಗ್ರಹ

ಮೈಸೂರು: ದೇಶದ ಸಂಸತ್ ಭವನದ ಮೇಲೆ ನಡೆದಿರುವ ದಾಳಿ ಖಂಡನೀಯ, ಇದು ಅತ್ಯಂತ ಆಘಾತಕಾರಿ ಎಂದು ಎಸ್ ಡಿಪಿಐ ಜಿಲ್ಲಾಧ್ಯಕ್ಷ ರಫತ್ ಖಾನ್ ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಅತ್ಯಂತ ಬಿಗಿಭದ್ರತೆಯ ಹೊರತಾಗಿಯೂ ಇಂತಹದ್ದೊಂದು ಘಟನೆ ನಡೆದಿರುವುದು ಆಘಾತಕಾರಿ ಬೆಳವಣಿಗೆ. ಇದು ಸಂಪೂರ್ಣವಾಗಿ ಭದ್ರತಾ ಲೋಪ ಎನ್ನುವುದು ಸ್ಪಷ್ಟವಾಗಿದೆ. ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ಘಟನೆಯ ಹಿಂದಿನ ಸಂಪೂರ್ಣ ಸತ್ಯವನ್ನು ದೇಶದ ಮುಂದಿಡುವುದು ಕೇಂದ್ರ ಸರ್ಕಾರ ಹಾಗೂ ಗೃಹ ಇಲಾಖೆಯ ಕರ್ತವ್ಯವಾಗಿದೆ ಎಂದು ಅವರು ಹೇಳಿದ್ದಾರೆ. ೨೨ ವರ್ಷಗಳ ಹಿಂದೆ ಸಂಸತ್ ಮೇಲೆ ಭಯೋತ್ಪಾದಕರು ನಡೆಸಿದ್ದ ದಾಳಿಯ ದಿನವನ್ನೇ ಆರಿಸಿಕೊಂಡು ಈ ದಾಳಿ ನಡೆದಿರುವುದನ್ನು ಗಮನಿಸಿದರೆ ಇದರ ಹಿಂದೆ ದೊಡ್ಡ ಹುನ್ನಾರವಿದೆ ಎಂಬ ಸಂಶಯ ಮೂಡಿದೆ. ಅಂದು ಕೂಡ ಬಿಜೆಪಿ ನೇತೃತ್ವದ ಎನ್.ಡಿ.ಎ ಸರ್ಕಾರವೇ ಇತ್ತು ಎನ್ನುವುದನ್ನು ಗಮನಿಸಬೇಕಾಗುತ್ತದೆ. ಇದು ದೇಶದ ಸುರಕ್ಷತೆಯ ಬಗ್ಗೆ ಹಲವಾರು ಪ್ರಶ್ನೆಗಳಿಗೆ ಕಾರಣವಾಗಿದೆ ಎಂದು ಅವರು ಹೇಳಿದ್ದಾರೆ.

ಸಂಸತ್ ಭವನದ ಮೇಲೆ ದಾಳಿ ನಡೆಸಿದ ಯುವಕನಿಗೆ ಮೈಸೂರು ಸಂಸದ ಪ್ರತಾಪ್ ಸಿಂಹ ಅವರೇ ಪಾಸ್ ನೀಡಿದ್ದಾರೆ. ಕೂಡಲೇ ಸಂಸದರನ್ನು ವಿಚಾರಣೆಗೆ ಒಳಪಡಿಸಬೇಕು. ದೇಶದ ಸಂಸತ್ ಭವನವೇ ಸುರಕ್ಷಿತವಾಗಿಲ್ಲದಿರುವಾಗ ದೇಶದ ಗಡಿ ಸುರಕ್ಷಿತವಾಗಿರು ತ್ತದೆಯಾ? ಎಂಬಿತ್ಯಾದಿ ಪ್ರಶ್ನೆಗಳು ಸಹಜವಾಗಿಯೇ ಹುಟ್ಟಿಕೊಳ್ಳುತ್ತದೆ. ಈ ಪ್ರಶ್ನೆಗಳಿಗೆಲ್ಲ ಉತ್ತರಿಸಬೇಕಾಗಿರುವ ಹೊಣೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರದ್ದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular