Monday, April 21, 2025
Google search engine

Homeರಾಜ್ಯಸುದ್ದಿಜಾಲಮಕ್ಕಳಲ್ಲಿರುವ ಪ್ರತಿಭೆ ಹೊರತರಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆ: ಬಿ.ಉಮಾದೇವಿ

ಮಕ್ಕಳಲ್ಲಿರುವ ಪ್ರತಿಭೆ ಹೊರತರಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆ: ಬಿ.ಉಮಾದೇವಿ

ಬಳ್ಳಾರಿ: ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಮಾತನಾಡಿ, ಶಾಲಾ ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಪ್ರತಿಭಾ ಕಾರಂಜಿ, ಕಲೋತ್ಸವದಂತಹ ಕಾರ್ಯಕ್ರಮಗಳು ಸಹಕಾರಿ ಮತ್ತು ಅವರ ಪ್ರತಿಭೆಯನ್ನು ಅನಾವರಣಗೊಳಿಸುತ್ತವೆ. ಉಮಾದೇವಿ ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಗರದ ಕೋಟೆ ಬಡಾವಣೆಯ ಸಂತಾಜನ್ ಪ್ರೌಢಶಾಲೆ ಆವರಣದಲ್ಲಿ ಮಂಗಳವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರತಿಯೊಂದು ಮಗುವಿನಲ್ಲೂ ಒಂದು ಶಕ್ತಿ (ಪ್ರತಿಭೆ) ಅಡಗಿರುತ್ತದೆ, ಅವರನ್ನು ಗುರುತಿಸಿ ಸೂಕ್ತ ವೇದಿಕೆ ಕಲ್ಪಿಸುವ ಕೆಲಸವನ್ನು ನಮ್ಮ ಶಿಕ್ಷಕರು ಮತ್ತು ವೃತ್ತಿಪರರು ಮಾಡಬೇಕು ಎಂದು ಸಲಹೆ ನೀಡಿದರು. ಶಾಲಾ ಮಕ್ಕಳಿಗೆ ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಿಗೂ ಒತ್ತು ನೀಡುವ ಕೆಲಸವನ್ನು ಶಿಕ್ಷಕರು ಮಾಡಬೇಕು. ಪಾಠದ ಜತೆಗೆ ಕಲೆ, ಸಂಸ್ಕೃತಿಯನ್ನು ಅತ್ಯಂತ ಪರಿಣಾಮಕಾರಿಯಾಗಿ ಮಾಡಬೇಕು ಎಂದರು. ನಮ್ಮ ಜಿಲ್ಲೆಯ ಬಹುತೇಕ ಮಕ್ಕಳು ರಾಜ್ಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಮಿಂಚಿದ್ದು, ಇನ್ನಷ್ಟು ಪ್ರಶಸ್ತಿಗಳನ್ನು ತಂದು ಜಿಲ್ಲೆಗೆ ಕೀರ್ತಿ ತರಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ೨೦೨೨-೨೩ನೇ ಸಾಲಿನ ರಾಜ್ಯ ಮಟ್ಟದ ಪ್ರತಿಭಾ ಪ್ರದರ್ಶನದಲ್ಲಿ ರಸಪ್ರಶ್ನೆ ವಿಭಾಗ, ಜಾನಪದ ನೃತ್ಯ ವಿಭಾಗ, ರಂಗೋಲಿ ಸ್ಪರ್ಧೆ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳು ಹಾಗೂ ಶಾಲಾ ಶಿಕ್ಷಕರನ್ನು ಸನ್ಮಾನಿಸಲಾಯಿತು.
ರಸಪ್ರಶ್ನೆ ಸ್ಪರ್ಧೆ ವಿಭಾಗ: ಮಾರೆಮ್ಮ, ಎಸ್‌ಇಎಸ್ ಶಾಲೆ, ಸಂಡೂರು.

ಈ ಸಂದರ್ಭದಲ್ಲಿ ಸಂತ ಜನಾರ ಶಿಕ್ಷಣ ಸಂಸ್ಥೆಯ ವ್ಯವಸ್ಥಾಪಕ ಹಾಗೂ ಪತ್ರ ವ್ಯವಹಾರಾಧಿಕಾರಿಗಳಾದ ವೋಲ್ಟರ್ ಮಿನೇಜಸ್, ಸಂತಜನರ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಶಾಂತುಸಿಲನ್ ಸೇರಿದಂತೆ ಶಿಕ್ಷಣಾಧಿಕಾರಿಗಳು, ಜಿಲ್ಲಾ ಉಪ ಯೋಜನಾ ಸಮನ್ವಯಾಧಿಕಾರಿಗಳು, ಡಯಟ್ ಉಪನ್ಯಾಸಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಜಿಲ್ಲಾ ದೈಹಿಕ ಶಿಕ್ಷಣ ನಿರೀಕ್ಷಕರು, ವಿಷಯ ಪರಿವೀಕ್ಷಕರು. , ಮತ್ತು ಜಿಲ್ಲಾ ಮತ್ತು ಮಟ್ಟದ ಸರ್ಕಾರ, ಅನುಯಾಯಿ ಅವರು ಮತ್ತು ಇತರರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular