Tuesday, April 22, 2025
Google search engine

Homeರಾಜ್ಯಸುದ್ದಿಜಾಲಸಾಂಸ್ಕೃತಿಕ ಶ್ರೀಮಂತಿಕೆ ಪರಿಚಯಿಸಲು ಪ್ರತಿಭಾ ಕಾರಂಜಿ, ಕಲಾ ಉತ್ಸವದ ಉದ್ದೇಶ: ಶಾಸಕ ಎನ್.ಎಚ್.ಕೋನರಡ್ಡಿ

ಸಾಂಸ್ಕೃತಿಕ ಶ್ರೀಮಂತಿಕೆ ಪರಿಚಯಿಸಲು ಪ್ರತಿಭಾ ಕಾರಂಜಿ, ಕಲಾ ಉತ್ಸವದ ಉದ್ದೇಶ: ಶಾಸಕ ಎನ್.ಎಚ್.ಕೋನರಡ್ಡಿ

ಧಾರವಾಡ : ಪ್ರಾದೇಶಿಕವಾಗಿ ಭಾಷೆ, ಸಂಸ್ಕೃತಿ, ಕಲೆ, ವೇಷಭೂಷಣಗಳಲ್ಲಿ ವ್ಯತ್ಯಾಸವಿದೆ. ಆದರೆ ಮಕ್ಕಳು ಕಲೆ ಮತ್ತು ಪ್ರತಿಭೆಗಳ ಮೂಲಕ ರಾಜ್ಯದ ಏಕತೆಗೆ ಒತ್ತು ನೀಡುತ್ತಾರೆ. ಈ ಕಾರ್ಯಕ್ರಮಕ್ಕೆ ಪೂರಕವಾಗಿ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎನ್ನುತ್ತಾರೆ ಶಾಸಕ ಎನ್. ಎಚ್.ಕೋನರಡ್ಡಿ ಅವರು ಹೇಳಿದರು.

ವಿದ್ಯಾಗಿರಿ ಜೆಎಸ್‌ಎಸ್ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಧಾರವಾಡ ಉಪನಿರ್ದೇಶಕ ಕಚೇರಿ ಹಾಗೂ ಜನತಾ ಶಿಕ್ಷಣ ಸಮಿತಿ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ೨೦೨೩-೨೪ನ್ನು ಸಂಗೀತ ವಾದ್ಯಗಳನ್ನು ಬಾರಿಸಿ, ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಗುರಿ ಹೊಂದಿರಬೇಕು. ನಿಮ್ಮ ಗುರಿಗೆ ಅನುಗುಣವಾಗಿ ನಿಮ್ಮ ಹವ್ಯಾಸಗಳನ್ನು ನಿರ್ಮಿಸಬೇಕು. ಶಾಲೆಗಳಲ್ಲಿ ಆಯೋಜಿಸುವ ವಿವಿಧ ಕಾರ್ಯಕ್ರಮಗಳು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಅನುವು ಮಾಡಿಕೊಡುತ್ತದೆ ಎಂದರು.

ಜಿಲ್ಲೆಯ ಸಂಸ್ಕೃತಿ, ಸಾಹಿತ್ಯ, ಕಲೆಗಳನ್ನು ಪರಿಚಯಿಸಲು ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉತ್ತಮ ಅವಕಾಶವಾಗಿದೆ. ಕಾರ್ಯಕ್ರಮವನ್ನು ಅದ್ಧೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಯೋಜಿಸಲಾಗಿದೆ ಎನ್ನುತ್ತಾರೆ ಶಾಸಕ ಎನ್. ಎಚ್.ಕೋನರಡ್ಡಿ ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ದಿವ್ಯಾ ಪ್ರಭು ಮಾತನಾಡಿ, ಮಕ್ಕಳಲ್ಲಿರುವ ಪ್ರತಿಭೆಯನ್ನು ಪ್ರೋತ್ಸಾಹಿಸುವ ಕಾರ್ಯವನ್ನು ಸರಕಾರ ಮಾಡುತ್ತಿದೆ.

ವಿದ್ಯಾರ್ಥಿ ಜೀವನದಲ್ಲಿ ಸೋಲು ಗೆಲುವು ಸಾಮಾನ್ಯ. ಇದರಿಂದ ಅವರ ಪ್ರತಿಭೆ ಬೆಳೆಯುತ್ತದೆ. ಸ್ಪರ್ಧೆಗಳು ಜೀವನದ ಪಾಠಗಳನ್ನು ಕಲಿಸುವ ಮೆಟ್ಟಿಲುಗಳಾಗಿವೆ. ಶಿಕ್ಷಣ ಇಲಾಖೆಯು ಹಲವು ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ವಿದ್ಯಾರ್ಥಿಗಳಲ್ಲಿ ಪರಿಪೂರ್ಣ ವ್ಯಕ್ತಿತ್ವ ರೂಪಿಸಲು ಪ್ರಯತ್ನಿಸುತ್ತದೆ ಎಂದರು.

ಕಾರ್ಯಕ್ರಮದಲ್ಲಿ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಶಿಕ್ಷಕರು ಹಾಗೂ ಶಿಕ್ಷಕರು ಭಾಗವಹಿಸಿದ್ದರು.

RELATED ARTICLES
- Advertisment -
Google search engine

Most Popular