ಹುಣಸೂರು: ಪ್ರತಿವರ್ಷದಂತೆ ಹುಣಸೂರು ತಾಲೂಕು ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಟಾಪರ್ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕಸಾಪ ತಾಲೂಕು ಅಧ್ಯಕ್ಷ ಹೆಚ್.ಕೆ. ಮಹದೇವ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಭಾನುವಾರ ಬೆಳಿಗ್ಗೆ 10.30ಕ್ಕೆ ರೋಟರಿ ಭವನದಲ್ಲಿ ರೋಟರಿ ಕ್ಲಬ್ ಮತ್ತು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆಸುತ್ತಿರುವ ಕಾರ್ಯಕ್ರಮ ಉದ್ಘಾಟನೆಯನ್ನು ಶಾಸಕ ಜಿ.ಡಿ.ಹರೀಶ್ ಗೌಡ ನೆರವೇರಿಸಲಿದ್ದಾರೆ. ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನು ಮಾಜಿ ಶಾಸಕ ಹೆಚ್.ಪಿ.ಮಂಜುನಾಥ್ ನಡೆಸಿಕೊಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ, ರೋಟರಿ ಅಧ್ಯಕ್ಷ ಪ್ರಸನ್ನ ಕೆ.ಪಿ. ತಹಸೀಲ್ದಾರ್ ಜೆ.ಮಂಜುನಾಥ್, ಶಿಕ್ಷಣಾಧಿಕಾರಿ. ಎಸ್.ಪಿ.ಮಹದೇವ್, ಮ.ಮ.ಕ್ಷೇ.ಅ.ಪ್ರಾ.ಮ.ಬೆಟ್ಟ ಕಾರ್ಯದರ್ಶಿ ರಘು ಎ.ಇ. ಕೆ.ಎ.ಎಸ್, ವಿಶೇಷ ಆಹ್ವಾನಿತರಾಗಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಹೆಚ್.ಆರ್.ಕೃಷ್ಣಕುಮಾರ್ ಭಾಗವಹಿಸಲಿದ್ದಾರೆ.