Monday, April 14, 2025
Google search engine

Homeರಾಜ್ಯಸುದ್ದಿಜಾಲದಿ.೧೩ ರಂದು ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ ಕಾರ್ಯಕ್ರಮ

ದಿ.೧೩ ರಂದು ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ ಕಾರ್ಯಕ್ರಮ

ಬಾಗಲಕೋಟೆ: ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ದಿ ಸಂಘದ ಬಾಗಲ ಕೋಟೆ ತಾಲೂಕಾ ಘಟಕದಿಂದ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸ್ವಾಗತ ಸಮಿತಿ ಅಧ್ಯಕ್ಷ ಆನಂದ ಜಿಗಜಿನ್ನಿ ಹೇಳಿದರು.
ನವನಗರದ ಪತ್ರಿಕಾಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇ ದಿ.೧೩ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ವಿದ್ಯಾಗಿರಿಯ ಅಥಣಿ ಕಲ್ಯಾಣ ಮಂಟಪದಲ್ಲಿ ನಡೆಯಲಿದ್ದು, ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಬೆಳಗಾವಿಯ ಅಂಕಲಗಿ ಅಡವಿ ಸಿದ್ದೇಶ್ವರ ಸಂಸ್ಥಾನ ಮಠದ ಮ.ನಿ.ಪ್ರ ಅಮರ ಸಿದ್ದೇಶ್ವರ ಮಹಾಸ್ವಾಮಿಗಳು ವಹಿ ಸುವರು. ಕೊಡಗು ವಿಶ್ವವಿದ್ಯಾಲಯ ಕುಲಪತಿಗಳಾದ ಡಾ.ಅಶೋಕ ಆಲೂರ ಕಾರ್ಯಕ್ರಮ ಉದ್ಘಾಟಿ ಸಲಿದ್ದಾರೆ. ಬಣಜಿಗ ಸಮಾಜದ ಕ್ಷೇಮಾಭಿವೃದ್ದಿ ಸಂಘದ ತಾಲೂಕಾಧ್ಯಕ್ಷ ಬಸವರಾಜ ಶೀಲ ವಂತ ಅಧ್ಯಕ್ಷತೆ ವಹಿಸಲಿದ್ದಾ ರೆಂದರು.
ಮುಖ್ಯ ಅತಿಥಿಗಳಾಗಿ ಶಾಸಕರಾದ ಎಚ್.ವಾಯ್.ಮೇಟಿ, ಜೆ.ಟಿ.ಪಾಟೀಲ ಆಗಮಿಸಲಿದ್ದು, ಬಣಜಿಗ ಸಮಾಜದ ಕ್ಷೇಮಾಭಿವೃದ್ದಿ ಸಂಘದ ಗೌರವಾಧ್ಯಕ್ಷ ಮಲ್ಲಪ್ಪಣ್ಣಾ ಆರಬ್ಬಿ, ಜಿಲ್ಲಾಧ್ಯಕ್ಷ ಶರಣಪ್ಪ ಗುಳೇದ, ಜಿಲ್ಲಾ ಉಪಾಧ್ಯಕ್ಷ ರವಿ ಕುಮಟಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುತ್ತು ಜೋಳದ ಉಪಸ್ಥಿತರಿರುವರು. ಶಿಕ್ಷಣ ಸಾಹಿತಿಗಳಾದ ಅಶೋಕ ಹಂಚಲಿ ಉಪನ್ಯಾಸ ನೀಡುವರು ಎಂದ ಅವರು, ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸ ಲಾಗುವುದು ಎಂದು ಹೇಳಿದರು.
ಸಮಾಜದ ತಾಲೂಕಾಧ್ಯಕ್ಷ ಬಸವರಾಜ ಶೀಲವಂತ ಮಾತನಾಡಿ, ಬಣಜಿಗ ಸಮಾಜದಿಂದ ಪ್ರತಿವರ್ಷವು ಕಾರ್ಯಕ್ರಮವನ್ನು ಹಮ್ಮಿಕೊಳ್ಳತ್ತಾ ಬಂದಿದ್ದು ಸಮಾ ಜದ ಮಕ್ಕಳು ಶೈಕ್ಷಣಿಕ, ಸಾಮಾಜಿಕ ಹಾಗೂ ಆಚಾರ, ವಿಚಾರ, ಸಂಸ್ಕೃತಿ ಹೊಂದುವ ಉದ್ದೇಶದಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಸುತ್ತಿದ್ದೇವೆ. ಕಾರ್ಯಕ್ರಮಕ್ಕೆ ತಾಲೂಕಿನ ಪ್ರತಿಯೊಂದು ಸಮಾಜದ ಕುಟುಂಬದವರು ಭಾಗವಹಿಸಿ ಯಶಸ್ವಿಗೊಳಿಸ ಬೇಕೆOದು ಮನವಿ ಮಾಡಿಕೊಂಡರು. ಸುದ್ದಿಗೋಷ್ಠಿಯಲ್ಲಿ ಸಮಾಜದ ಮುಖಂಡರಾದ ಮಲ್ಲಪ್ಪಣ್ಣಾ ಆರಬ್ಬಿ, ಶರಣಪ್ಪ ಗುಳೇದ, ರವಿ ಕುಮಟಗಿ, ಮುರುಗೇಶ ಶೀವ ಗುತ್ತಿ, ವಿಶ್ವನಾಥ ವೈಜಾಪೂರ, ವಿನಾ ಯಕ ನಾವಲಗಿ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular