Friday, April 18, 2025
Google search engine

Homeರಾಜ್ಯಸೆ.15ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆಗೆ ಪೂರ್ವ ಸಭೆ

ಸೆ.15ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆಗೆ ಪೂರ್ವ ಸಭೆ

ಬೆಂಗಳೂರು: ಸೆಪ್ಟೆಂಬರ್ ೧೫ ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಿಸಲು ಸರ್ಕಾರದ ನಿರ್ಧಾರ ಕೈಗೊಳ್ಳಲಾಗಿದೆ ಎಂಬುದಾಗಿ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ ಹೆಚ್ ಸಿ ಮಹದೇವಪ್ಪ ಹೇಳಿದ್ದಾರೆ.

ಇಂದು ಮಂಗಳವಾರ ವಿಧಾನಸೌಧದ ಕೊಠಡಿ ಸಂಖ್ಯೆ ೩೧೩ ರಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಾ ಹೆಚ್ ಸಿ ಮಹದೇವಪ್ಪನವರ ನೇತೃತ್ವದಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.

ಸೆಪ್ಟೆಂಬರ್ ೧೫ ನೇ ತಾರೀಖಿನಂದು ಜರುಗುತ್ತಿರುವ ಈ ಬೃಹತ್ ಕಾರ್ಯಕ್ರಮದಲ್ಲಿ ಬೀದರ್ ನಿಂದ ಚಾಮರಾಜನಗರದ ವರೆಗೆ ಬೃಹತ್ ಮಾನವ ಸರಪಳಿಯನ್ನು ನಿರ್ಮಿಸಿ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ದಾರಿಯುದ್ದಕ್ಕೂ ಪಸರಿಸುವ ಕೆಲಸವನ್ನು ಸರ್ಕಾರ ಮಾಡಲಿದ್ದು, ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಮಾನವ ಸರಪಳಿಯ ಜವಾಬ್ದಾರಿಯನ್ನು ವಹಿಸಲಿದ್ದಾರೆ.

ಸೆಪ್ಟೆಂಬರ್ ೧೫ ರ ಆ ದಿನ ಪ್ರಜಾಪ್ರಭುತ್ವದ ಭಾಗವಾಗಿರುವ ಎಲ್ಲ ಜನರೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬಿಂಬಿಸುವುದಕ್ಕೆ ಪೂರಕವಾಗಿ ಚಟುವಟಿಕೆಗಳನ್ನು ಮಾಡಬಹುದು ಮತ್ತು ಮಾನವ ಸರಪಳಿಯಲ್ಲಿ ಪಾಲ್ಗೊಳ್ಳಬಹುದು. ಸೆಪ್ಟೆಂಬರ್ ೧೫ ರಂದು ಬೆಳಗ್ಗೆ ೮.೩೦ ಕ್ಕೆ ಆರಂಭಗೊಳ್ಳುವ ಈ ಕಾರ್ಯಕ್ರಮದಲ್ಲಿ ಸುಮಾರು ೪೦ ಲಕ್ಷ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಮಾನ್ಯ ಸಚಿವರು ತಿಳಿಸಿದರು. ಈ ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಐಟಿ ಬಿಟಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular