Friday, April 18, 2025
Google search engine

Homeರಾಜ್ಯಮಳೆಗೆ ಯಾವುದೇ ಅವಘಡ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಮಳೆಗೆ ಯಾವುದೇ ಅವಘಡ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಜಿಲ್ಲಾಡಳಿತದಿಂದ ಯಾವುದೇ ಅವಘಡ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಹೆಬ್ಬಾಳ್ಕರ್, ಮಳೆಗಾಲದ ಸಿದ್ಧತೆಗಾಗಿ ಈಗಾಗಲೇ ಉಡುಪಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಲಾಗಿದೆ. ಬೀಳುವ ಅಪಾಯವಿರುವ ಮರಗಳನ್ನು ಕಡಿಯುವಂತೆ ಸೂಚನೆ ನೀಡಲಾಯಿತು. ಅಂತಹ ಸುಮಾರು ೪೦೦ ಮರಗಳನ್ನು ತೆಗೆಯಲಾಗಿದೆ ಮತ್ತು ೮೦ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸಲಾಗಿದೆ.

ಕೆಲವು ತಗ್ಗು ಪ್ರದೇಶಗಳಲ್ಲಿ ಮನೆಗಳಿಗೆ ನೀರು ನುಗ್ಗಿದ್ದು, ನಿವಾಸಿಗಳನ್ನು ಆರೈಕೆ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ. ಕಳೆದ ವರ್ಷ ಮಳೆಯಿಂದ ಉಂಟಾದ ಸಮಸ್ಯೆಗಳಿಂದ ಪಾಠ ಕಲಿತು ಈ ವರ್ಷ ವಿಶೇಷ ಮುಂಜಾಗ್ರತೆ ವಹಿಸಲಾಗಿದೆ. ಭೂಕುಸಿತದಿಂದ ಕೆಲವು ಮನೆಗಳಿಗೆ ಹಾನಿಯಾಗಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ. ತಕ್ಷಣದ ಪರಿಹಾರ ಕ್ರಮಗಳಿಗೆ ಈಗಾಗಲೇ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ಹೆಬ್ಬಾಳ್ಕರ್ ತಿಳಿಸಿದರು.

ಉಡುಪಿ ನಗರದಲ್ಲಿ ಅಂಡರ್ ಗ್ರೌಂಡ್ ಡ್ರೈನೇಜ್ ವ್ಯವಸ್ಥೆ ಇಲ್ಲದಿರುವುದರಿಂದ ಮಳೆಗಾಲದಲ್ಲಿ ರಸ್ತೆಗಳಲ್ಲಿ ನೀರು ಸಂಗ್ರಹವಾಗುತ್ತಿದೆ ಎಂದು ತಿಳಿಸಿದರು. ಒಳಚರಂಡಿ ವ್ಯವಸ್ಥೆ ಕಲ್ಪಿಸಲು ಯೋಜನೆ ರೂಪಿಸಲಾಗಿದ್ದು, ಒಂದೆರಡು ವಾರಗಳಲ್ಲಿ ಟೆಂಡರ್ ಪ್ರಕ್ರಿಯೆ ಆರಂಭವಾಗಲಿದೆ. ನಿನ್ನೆ ಸುರಿದ ಭಾರೀ ಮಳೆಯಿಂದಾಗಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular