Thursday, May 22, 2025
Google search engine

Homeರಾಜ್ಯಸಿಕ್ಕಿಂ ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ಪ್ರೇಮ್ ಸಿಂಗ್ ತಮಾಂಗ್ ಪ್ರಮಾಣವಚನ ಸ್ವೀಕಾರ

ಸಿಕ್ಕಿಂ ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ಪ್ರೇಮ್ ಸಿಂಗ್ ತಮಾಂಗ್ ಪ್ರಮಾಣವಚನ ಸ್ವೀಕಾರ

ಸಿಕ್ಕಿಂ: ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ (ಎಸ್ಕೆಎಂ) ನಾಯಕ ಪ್ರೇಮ್ ಸಿಂಗ್ ತಮಾಂಗ್ ಇಂದು ಸೋಮವಾರ ಎರಡನೇ ಅವಧಿಗೆ ಸಿಕ್ಕಿಂ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಗ್ಯಾಂಗ್ಟಾಕ್ನ ಪಾಲ್ಜೋರ್ ಕ್ರೀಡಾಂಗಣದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯಪಾಲ ಲಕ್ಷ್ಮಣ್ ಆಚಾರ್ಯ ಅವರು ತಮಾಂಗ್ ಮತ್ತು ಅವರ ಮಂತ್ರಿಮಂಡಲಕ್ಕೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ತಮಾಂಗ್ ಹಿಮಾಲಯನ್ ರಾಜ್ಯದ ಮುಖ್ಯಮಂತ್ರಿಯಾಗಿ ಎರಡನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸಿದರು. ಜೂನ್ ೨ ರಂದು ನಡೆದ ಎಸ್ಕೆಎಂ ಸಭೆಯಲ್ಲಿ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಇತ್ತೀಚೆಗೆ ಮುಕ್ತಾಯಗೊಂಡ ಸಿಕ್ಕಿಂ ವಿಧಾನಸಭಾ ಚುನಾವಣೆಯಲ್ಲಿ, ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಎಸ್ಕೆಎಂ ೩೨ ಸ್ಥಾನಗಳಲ್ಲಿ ೩೧ ಸ್ಥಾನಗಳನ್ನು ಗೆದ್ದಿತ್ತು. ಪ್ರತಿಪಕ್ಷ ಎಸ್ಡಿಎಫ್ ಒಂದು ಸ್ಥಾನವನ್ನು ಗೆದ್ದಿತ್ತು. ಇಂದು ಸಿಕ್ಕೀಂ ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ಪ್ರೇಮ್ ಸಿಂಗ್ ತಮಾಂಗ್ ಪ್ರಮಾಣವಚನ ಸ್ವೀಕರಿಸಿದರು.

RELATED ARTICLES
- Advertisment -
Google search engine

Most Popular