Sunday, April 20, 2025
Google search engine

Homeರಾಜ್ಯಫೆಬ್ರವರಿಯಲ್ಲಿ ಜಿಪಂ, & ತಾಪಂ ಚುನಾವಣೆ ನಡೆಸಲು ಸಿದ್ಧತೆ : ಡಿಕೆ ಶಿವಕುಮಾರ್

ಫೆಬ್ರವರಿಯಲ್ಲಿ ಜಿಪಂ, & ತಾಪಂ ಚುನಾವಣೆ ನಡೆಸಲು ಸಿದ್ಧತೆ : ಡಿಕೆ ಶಿವಕುಮಾರ್

ಬೆಂಗಳೂರು : ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆ ದೃಷ್ಟಿಯಿಂದ ಇದನ್ನು ಮಾಡುತ್ತಿದ್ದೀರಾ ಎಂದು ಕೇಳಿದಾಗ, ನಾವು ಯಾವುದೋ ಒಂದು ಉದ್ದೇಶ ಇಟ್ಟುಕೊಂಡು ವೇದಿಕೆ ಸಿದ್ಧ ಮಾಡಬೇಕಲ್ಲವೇ ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು.

ಈ ಸಮಾವೇಶ ಹಾಸನಕ್ಕೆ ಸೀಮಿತವೇ ಅಥವಾ ರಾಜ್ಯಾದ್ಯಂತ ಮಾಡುತ್ತೀರಾ ಎಂದು ಕೇಳಿದಾಗ, “ನಾವು ರಾಜ್ಯಾದ್ಯಂತ ತಲುಪಬೇಕು. ಹಾಸನ ಕಾರ್ಯಕ್ರಮ ನಂತರ ಬೆಳಗಾವಿಯಲ್ಲಿ ದೊಡ್ಡ ಕಾರ್ಯಕ್ರಮ ನಡೆಯಲಿದೆ. ಈ ಬಗ್ಗೆ ನಾಳೆ ಸಭೆ ಮಾಡಿ ನಂತರ ಹೆಚ್ಚಿನ ಮಾಹಿತಿ ನೀಡುತ್ತೇವೆ” ಎಂದು ತಿಳಿಸಿದರು.

ಫೆಬ್ರವರಿಯಲ್ಲಿ ಸಂಪುಟ ವಿಸ್ತರಣೆ ಆಗುವುದೇ ಎಂದು ಕೇಳಿದಾಗ, ನಾನು ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಹೊರತು, ಮುಖ್ಯಮಂತ್ರಿಯಲ್ಲ. ಸಧ್ಯಕ್ಕೆ ಈ ಬಗ್ಗೆ ಚರ್ಚೆ ಇಲ್ಲ. ಅದರ ಅವಶ್ಯಕತೆಯೂ ಇಲ್ಲ. ಸಧ್ಯದಲ್ಲೇ ಅಧಿವೇಶನವಿದೆ. ಒಂದು ಸಚಿವ ಸ್ಥಾನ ಮಾತ್ರ ಬಾಕಿ ಇದೆ. ಈ ಬಗ್ಗೆ ಸಿಎಂ ಉತ್ತರ ನೀಡಿದ್ದಾರೆ. ಬೇರೆ ಯಾವುದೇ ಸ್ಥಾನ ಖಾಲಿ ಇಲ್ಲ” ಎಂದು ತಿಳಿಸಿದರು.ಕೆಪಿಸಿಸಿ ಅಧ್ಯಕ್ಷ ಸ್ಥಾನವೂ ಖಾಲಿ ಇಲ್ಲ ಎಂದು ಹೇಳುತ್ತಿದ್ದೀರಾ ಎಂದು ಕೇಳಿದಾಗ, ನಾನು ನನ್ನ ಭಾಷೆಯಲ್ಲಿ ಹೇಳಿದ್ದೇನೆ, ನೀವು ಏನು ವಿಶ್ಲೇಷಣೆ ಮಾಡಿಕೊಳ್ಳುತ್ತೀರೋ ಮಾಡಿಕೊಳ್ಳಿ ಎಂದು ತಿಳಿಸಿದರು.

RELATED ARTICLES
- Advertisment -
Google search engine

Most Popular