Saturday, April 19, 2025
Google search engine

Homeರಾಜ್ಯಮುಂದಿನ ಗೆಲುವಿಗೆ ಸಿದ್ಧತೆ: ರಾಹುಲ್ ಗಾಂಧಿ ಸಲಹೆ

ಮುಂದಿನ ಗೆಲುವಿಗೆ ಸಿದ್ಧತೆ: ರಾಹುಲ್ ಗಾಂಧಿ ಸಲಹೆ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ೧೬ ರಿಂದ ೧೭ಸ್ಥಾನ ಗೆಲ್ಲುವ ವಿಶ್ವಾಸವನ್ನು ಹೊಂದಿದ್ದ ಕಾಂಗ್ರೆಸ್ ೯ ಸ್ಥಾನಗಳಿಗೆ ತೃಪ್ತಿ ಪಟ್ಟುಕೊಂಡಿದೆ. ನಾಯಕರು ನಿರೀಕ್ಷಿಸಿದ ಫಲಿತಾಂಶ ಬಂದಿಲ್ಲ. ಈ ಕುರಿತು ಆತ್ಮಾವಲೋಕನ ನಡೆಸಿ, ಈಗಿನಿಂದಲೇ ಪಕ್ಷ ಸಂಘಟನೆ ಮಾಡಿ ಬಲಗೊಳಿಸುವ ಮೂಲಕ ಮುಂದಿನ ಗೆಲುವಿಗೆ ಸಿದ್ಧತೆ ನಡೆಸಬೇಕು ಎಂದು ವಿಜೇತ ಮತ್ತು ಪರಾಜಿತ ಅಭ್ಯರ್ಥಿಗಳಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲಹೆ ನೀಡಿದರು.

ಇಂದು ಶುಕ್ರವಾರ ಕ್ವೀನ್ಸ್ ರಸ್ತೆಯ ಭಾರತ್ ಜೋಡೋ ಭವನದಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಮತ್ತಿತರರು ಉಪಸ್ಥಿತರಿದ್ದರು. ರಾಜ್ಯ ಹಾಗೂ ದೇಶದ ಅಭಿವೃದ್ಧಿ ದೃಷ್ಟಿಕೋನದಿಂದ ಮುಂದೆ ಕೈಗೊಳ್ಳಬೇಕಿರುವ ಕಾರ್ಯಗಳ ಕುರಿತು ಈ ವೇಳೆ ಚರ್ಚಿಸಲಾಯಿತು. ಇದಕ್ಕೂ ಮುನ್ನಾ ಬಿಜೆಪಿ ದಾಖಲಿಸಿದ್ದ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾವೇರಿ ಭವನ ಹಿಂಭಾಗದ ವಿಶೇಷ ನ್ಯಾಯಾಲಯ ವಿಚಾರಣೆಗೆ ಅವರು ಹಾಜರಾದರು. ಅವರಿಗೆ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿತು.

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್ ಹೊಸದಾಗಿ ಆಯ್ಕೆಯಾದ ಸಂಸದರನ್ನು ರಾಹುಲ್ ಗಾಂಧಿ ಭೇಟಿ ಮಾಡಿದರು. ಯಾವ ರೀತಿ ಕೆಲಸ ಮಾಡಬೇಕು ಅನ್ನೋದನ್ನು ತಿಳಿಸಿಕೊಟ್ಟಿದ್ದಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ವ್ಯಕ್ತಿ ಗೆದ್ದಿದ್ದಾರೆ. ಡಿಕೆ ಸುರೇಶ್ ಗೆಲುವಿನ ಬಗ್ಗೆ ಅತಿಯಾದ ಆತ್ಮವಿಶ್ವಾಸವಿಲ್ಲ. ಆದರೆ, ಬಿಜೆಪಿಯವರು ಒಳ್ಳೆಯ ತಂತ್ರಗಾರಿಕೆ ಮಾಡಿದ್ದಾರೆ. ಚನ್ನಪಟ್ಟಣ ಉಪ ಚುನಾವಣೆ ಕುರಿತು ಇನ್ನೂ ಚಿಂತನೆ ನಡೆಸಿಲ್ಲ.ಇನ್ನೋ ಸೋಲಿನ ನಿದ್ರೆಯಿಂದ ಹೊರಬಂದಿಲ್ಲ ಎಂದು ತಿಳಿಸಿದರು.

RELATED ARTICLES
- Advertisment -
Google search engine

Most Popular