ಬೆಂಗಳೂರು: 2023ನೇ ಸಾಲಿನ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ(ನಿಯಂತ್ರಣ ಮತ್ತು ಅಭಿವೃದ್ಧಿ ) ತಿದ್ದುಪಡಿ ವಿಧೇಯಕ ಸೇರಿದಂತೆ 6 ವಿಧೇಯಕಗಳನ್ನು ವಿಧಾನಸಭೆಯಲ್ಲಿಂದು ಮಂಡಿಸಲಾಯಿತು.
ಶಾಸನ ರಚನಾ ಕಲಾಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು 2023ನೇ ಸಾಲಿನ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ತಿದ್ದುಪಡಿ ವಿಧೇಯಕ ಹಾಗೂ 2023ನೇ ಸಾಲಿನ ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ ತಿದ್ದುಪಡಿ ವಿಧೇಯಕವನ್ನು ಮಂಡಿಸಿದರು.
ಕಾನೂನು ಸಚಿವ ಎಚ್.ಕೆ.ಪಾಟೀಲ್ ಪರವಾಗಿ ಸಚಿವ ಪ್ರಿಯಾಂಕ ಖರ್ಗೆ ಮಾತನಾಡಿ, 2023ನೇ ಸಾಲಿನ ಕರ್ನಾಟಕ ವಿಧಾನಮಂಡಲ(ಅನರ್ಹತಾ ನಿವಾರಣಾ) ತಿದ್ದುಪಡಿ ವಿಧೇಯಕವನ್ನು ಮಂಡಿಸಿದರು.ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪರವಾಗಿ 2023ನೇ ಸಾಲಿನ ಕರ್ನಾಟಕ ಅಗ್ನಿಶಾಮಕ ತಿದ್ದುಪಡಿ ವಿಧೇಯಕ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪರವಾಗಿ 2023ನೇ ಸಾಲಿನ ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಕಾರ ತಿದ್ದುಪಡಿ ವಿಧೆಯಕವನ್ನು ಪ್ರಿಯಾಂಕ್ ಖರ್ಗೆ ಮಂಡಿಸಿದರು.
2023ನೇ ಸಾಲಿನ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ ) ತಿದ್ದುಪಡಿ ವಿಧೇಯಕವನ್ನು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಮಂಡಿಸಿದರು.