ಸಾಲಿಗ್ರಾಮ: ಕರ್ನಾಟಕ ಪ್ರೆಸ್‌ಕ್ಲಬ್ ಕೆ.ಆರ್.ನಗರ ತಾಲ್ಲೂಕು ಘಟಕದ ವತಿಯಿಂದ ೨೦೨೩ನೇ ಸಾಲಿನ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಜುಲೈ ೧ರ ಶನಿವಾರ ಕೆ.ಆರ್.ನಗರ ಪಟ್ಟಣದ ಶ್ರೀ ಕೃಷ್ಣಮಂದಿರದಲ್ಲಿ ಬೆಳಿಗ್ಗೆ ೧೧ಗಂಟೆಗೆ ಆಯೋಜಿಸಲಾಗಿದೆ ಎಂದು ಕರ್ನಾಟಕ ಪ್ರೆಸ್‌ಕ್ಲಬ್ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಟಿ.ಮೋಹನ್ ಕುಮಾರ್ ತಿಳಿಸಿದರು. ಅವರು ಈ ಕುರಿತು ಪತ್ರಿಕಾ ಹೇಳಿಕೆಯನ್ನು ನೀಡಿ ಪತ್ರಿಕಾ ದಿನಾಚರಣೆಯ ಅಂಗವಾಗಿ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿಯ ೨೦೨೩ನೇ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಗಳಿಸಿರುವ ಕೃಷ್ಣರಾಜನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು ಹಾಗೂ ವಿವಿಧ ಕ್ಷೇತ್ರಗಳ ಸಾಧಕರುಗಳಿಗೆ ಸನ್ಮಾನ ಸಮಾರಂಭವನ್ನು ಏರ್ಪಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಕಾರ್ಯಕ್ರಮವನ್ನು ಶಾಸಕ ಡಿ.ರವಿಶಂಕರ್ ಉದ್ಘಾಟಿಸಲಿದ್ದು, ವಿವಿಧ ಕ್ಷೇತ್ರಗಳ ಸಾಧಕರುಗಳಿಗೆ ವಿಧಾನ ಪರಿಷತ್ ಸದಸ್ಯ ಅಡಗೂರು ಹೆಚ್.ವಿಶ್ವನಾಥ್ ಸನ್ಮಾನಿಸುವರು, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮಾಜಿ ಸಚಿವ ಸಾ.ರಾ.ಮಹೇಶ್ ಪ್ರತಿಭಾ ಪುರಸ್ಕಾರ ನೀಡಿ ಅಭಿನಂದಿಸುವರು, ಅಧ್ಯಕ್ಷತೆಯನ್ನು ಕರ್ನಾಟಕ ಪ್ರೆಸ್‌ಕ್ಲಬ್‌ನ ಕೆ.ಆರ್.ನಗರ ತಾಲೂಕು ಘಟಕದ ಅಧ್ಯಕ್ಷ ಕೆ.ಟಿ.ಮೋಹನ್‌ಕುಮಾರ್ ವಹಿಸಲಿದ್ದಾರೆ. ಪ್ರಧಾನ ಭಾಷಣವನ್ನು ಸಾಹಿತಿ ಬನ್ನೂರು.ಕೆ.ರಾಜು ಮಾಡಲಿದ್ದು ಮುಖ್ಯ ಅತಿಥಿಗಳಾಗಿ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಹೆಚ್.ಎನ್.ವಿಜಯ್, ನವನಗರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್‌ನ ಅಧ್ಯಕ್ಷ ಕೆ.ಎನ್.ಬಸಂತ್, ತಾಲ್ಲೂಕು ಶರಣ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಸಿ.ಪಿ.ರಮೇಶ್ ಕುಮಾರ್, ಕಾಂಗ್ರೆಸ್ ಮುಖಂಡ ಎಸ್.ಜಿ.ಬಾಬು ಹನುಮಾನ್, ಖ್ಯಾತ ಮೂಳೆ ತಜ್ಞ ಡಾ.ಮೆಹಬೂಬ್ ಖಾನ್, ಜಿ.ಪಂ.ಮಾಜಿ ಸದಸ್ಯ ಅಚ್ಚುತಾನಂದ, ಬಿಜೆಪಿ ಮುಖಂಡ ಹೊಸಹಳ್ಳಿ ವೆಂಕಟೇಶ್, ಕರ್ನಾಟಕ ಪ್ರೆಸ್‌ಕ್ಲಬ್‌ನ ರಾಜ್ಯಾಧ್ಯಕ್ಷ ಎಸ್.ಜಿ.ರಮೇಶ್, ಪ್ರಧಾನ ಕಾರ್ಯದರ್ಶಿ ಎಂ.ದಯಾನಂದ, ಕಾರ್ಯಾಧ್ಯಕ್ಷ ಖಾಜಾಹುಸೇನ್, ತಹಸೀಲ್ದಾರ್ ಎಂ.ಜಿ.ಸಂತೋಷ್ ಕುಮಾರ್, ಪೊಲೀಸ್ ಇನ್ಸ್‌ಪೆಕ್ಟರ್ ಎಂ.ಆರ್.ಲವ, ತಾ.ಪಂ.ಇಓ ಹೆಚ್.ಕೆ.ಸತೀಶ್ ಸೇರಿದಂತೆ ಹಲವರು ಪಾಲ್ಗೊಳ್ಳಲಿದ್ದಾರೆ.
ಸಮಾರಂಭದಲ್ಲಿ ಶ್ರೀ ಶಾಂತಮಲ್ಲಿಕಾರ್ಜುನ ಡ್ರಾಮಾಸೀನ್ಸ್‌ನ ಎಸ್.ವೈ.ದಯಾನಂದ್ ರಮೇಶ್, ವೈದ್ಯ ಡಾ.ದರ್ಶನ್, ನಿವೃತ್ತ ಶಿಕ್ಷಕ ಸಿದ್ದರಾಮೇಗೌಡ, ಅಂತರಾಷ್ಟ್ರೀಯ ವಿದ್ಯಾರ್ಥಿ ಒಲಂಪಿಕ್ ಸಿಂಗಲ್ಸ್ ಶೆಟಲ್ ಬ್ಯಾಡ್ಮಿಂಟನ್ ಚಿನ್ನದ ಪದಕ ವಿಜೇತ ಎ.ವಿದ್ಯಾನಂದ ಕಶ್ಯಪ್, ರೈತ ಸಂಘಟನೆಯ ಹಿರಿಯ ಮುಖಂಡ ಗರುಡಗಂಭದ ಸ್ವಾಮಿ, ಚಲನಚಿತ್ರ ಹಾಗೂ ಕಿರುತೆರೆ ಕಲಾವಿದ ಕಲಾರತಿ ಮಹದೇವ್, ಆಲ್ಫಾ ಪದವಿ ಪೂರ್ವ ಕಾಲೇಜಿನ ಕಾರ್ಯದರ್ಶಿ ವೈ.ಎಸ್.ಸುಬ್ರಮಣ್ಯ, ನಿವೃತ್ತ ಯೋಧ ಪಾಪೇಗೌಡ, ಮಹಿಳಾ ಸಂಘಟನೆಯ ಕೆ.ಬಿ.ಸುನೀತ ರಮೇಶ್, ಗೃಹರಕ್ಷಕ ದಳದ ಘಟಕಾಧಿಕಾರಿ ಜೆ.ಸ್ವಾಮಿ, ಯೋಗಗುರು ಪಿ.ಆರ್.ವಿಶ್ವನಾಥಶೆಟ್ಟಿ, ನಿವೃತ್ತ ಪೌರಕಾರ್ಮಿಕ ಮಹಿಳೆ ಚಾಮಮ್ಮ, ಡೋಲುವಿಧ್ವಾಂಸ ಸುರೇಶ್ ಅವರುಗಳನ್ನು ಸನ್ಮಾನಿಸಲಾಗುವುದು ಹಾಗೂ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿನ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.