Thursday, April 17, 2025
Google search engine

Homeರಾಜ್ಯಸಿಎಂ ಸಿದ್ದರಾಮಯ್ಯ ಅವರನ್ನ ಕಂಡರೆ ಪ್ರಧಾನಿ ಮೋದಿ, ಅಮಿತ್ ಶಾಗೆ ಭಯ : ಸಚಿವ ಶಿವರಾಜ್...

ಸಿಎಂ ಸಿದ್ದರಾಮಯ್ಯ ಅವರನ್ನ ಕಂಡರೆ ಪ್ರಧಾನಿ ಮೋದಿ, ಅಮಿತ್ ಶಾಗೆ ಭಯ : ಸಚಿವ ಶಿವರಾಜ್ ತಂಗಡಗಿ

ಕೊಪ್ಪಳ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರನ್ನು ಕಂಡರೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರಿಗೆ ಹೆದರಿಕೆ ಇದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕಕ್ಕೆ 30, 35 ಬಾರಿ ಭೇಟಿ ನೀಡಿದ್ದರು ಸಹ ಕರ್ನಾಟಕ ಜನತೆ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದ್ದಾರೆ. ಹಾಗಾಗಿ ಅವರಿಗೆ ಸಿದ್ದರಾಮಯ್ಯ ಅವರನ್ನು ಕಂಡರೆ ಭಯವಿದೆ ಎಂದು ಸಚಿವ ಶಿವರಾಜ್ ತಂಗಡಗಿ ತಿಳಿಸಿದರು.

ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಡಾ ಹಗರಣ ಯಾವ ಸರ್ಕಾರದಲ್ಲಿ ಆಗಿದೆ? ಸಿಎಂ ಸಿದ್ದರಾಮಯ್ಯ ಕಡತಕ್ಕೆ ಏನಾದರೂ ಸಹಿ ಹಾಕಿದ್ದಾರಾ? ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಅವರ ಏನು ಪಾತ್ರವಿಲ್ಲ. ಸಿದ್ದರಾಮಯ್ಯ ಅವರನ್ನು ಕಂಡರೆ ಮೋದಿ ಅಮಿತ್ ಶಾ ಗೆ ಭಯ ಎಂದು ಅವರು ತಿಳಿಸಿದರು.

ಮುಡಾ ಬೆಳವಣಿಗೆ ನೋಡಿದರೆ ರಾಜಕೀಯ ಷಡ್ಯಂತ್ರ ಎಂದು ಸ್ಪಷ್ಟವಾಗಿ ಗೊತ್ತಾಗುತ್ತದೆ. ಮುಡಾ ಅನ್ನೋ ವಿಚಾರ ಪ್ರಸ್ತಾಪ ಮಾಡುತ್ತಿದ್ದೀರಲ್ಲ ಆಗ ಯಾವ ಸರ್ಕಾರ ಇತ್ತು? ಪ್ರಧಾನಿ ಮೋದಿ ಅವರಿಗೆ ಮತ್ತು ಅಮಿತ್ ಶಾ ಅವರಿಗೆ ಸಿದ್ದರಾಮಯ್ಯ ಅವರನ್ನು ಕೊಂಡರೆ ಹೆದರಿಕೆ. 35 ಬಾರಿ ಕರ್ನಾಟಕಕ್ಕೆ ಭೇಟಿ ನೀಡಿ ಚುನಾವಣಾ ಪ್ರಚಾರ ಮಾಡಿದ್ದರು ಕೂಡ ಕರ್ನಾಟಕ ಜನತೆ ನಮ್ಮನ್ನು ನಂಬಲಿಲ್ಲ.

ಆದರೆ ಸಿದ್ದರಾಮಯ್ಯ, ರಾಹುಲ್ ಗಾಂಧಿ ಮಲ್ಲಿಕಾರ್ಜುನ ಖರ್ಗೆ, ಡಿಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷವನ್ನು ನಂಬಿದ್ದರು. ಇಡೀ ದೇಶದಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿದ್ದು, ಪ್ರಧಾನಿಯಾಗಿ ನಾನು ಪ್ರಚಾರಕ್ಕೆ ಬಂದರೂ ಸಹ ಕರ್ನಾಟಕದ ಜನತೆ ಬಿಜೆಪಿಯನ್ನು ವಿಧಾನಸಭಾ ಚುನಾವಣೆಯಲ್ಲಿ ಸೋಲಿಸಿತು ಎಂಬ ಭ್ರಮನಿರಸವಾಗಿದ್ದರಿಂದ ಸಿದ್ದರಾಮಯ್ಯ ಅವರನ್ನು ಟಾರ್ಗೆಟ್ ಮಾಡಿದ್ದಾರೆ ಎಂದು ಕಿಡಿ ಕಾರಿದರು.

RELATED ARTICLES
- Advertisment -
Google search engine

Most Popular