Friday, April 18, 2025
Google search engine

HomeUncategorizedರಾಷ್ಟ್ರೀಯಯುವ ಜನತೆಯನ್ನು ನಿರುದ್ಯೋಗಿಗಳನ್ನಾಗಿ ಮಾಡುವುದೇ ಪ್ರಧಾನಿ ಮೋದಿ ಸರ್ಕಾರದ ಗುರಿ: ಮಲ್ಲಿಕಾರ್ಜನ ಖರ್ಗೆ

ಯುವ ಜನತೆಯನ್ನು ನಿರುದ್ಯೋಗಿಗಳನ್ನಾಗಿ ಮಾಡುವುದೇ ಪ್ರಧಾನಿ ಮೋದಿ ಸರ್ಕಾರದ ಗುರಿ: ಮಲ್ಲಿಕಾರ್ಜನ ಖರ್ಗೆ

ನವದೆಹಲಿ: ಯುವ ಜನತೆಯನ್ನು ನಿರುದ್ಯೋಗಿಗಳನ್ನಾಗಿ ಮಾಡುವುದೇ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಏಕೈಕ ಗುರಿಯಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಮಂಗಳವಾರ ಆರೋಪಿಸಿದ್ದಾರೆ.

ದೇಶದಲ್ಲಿ ನಿರುದ್ಯೋಗ ಸಮಸ್ಯೆ ತೀವ್ರವಾಗಿದ್ದು, ಈ ಸಂಬಂಧ ವಿವಿಧ ದತ್ತಾಂಶಗಳನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರದ ವಿರುದ್ಧ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ.

‘ನಿರುದ್ಯೋಗ ಸಂಬಂಧ ‘ಸಿಟಿಗ್ರೂಪ್’ ಸ್ವತಂತ್ರ ವರದಿಯನ್ನು ಮೋದಿ ಸರ್ಕಾರ ನಿರಾಕರಿಸಬಹುದು. ಆದರೆ ಸರ್ಕಾರಿ ದತ್ತಾಂಶವನ್ನು ನಿರಾಕರಿಸಲು ಹೇಗೆ ಸಾಧ್ಯ? ಕಳೆದ 10 ವರ್ಷಗಳಲ್ಲಿ ಕೋಟ್ಯಂತರ ಯುವ ಜನತೆಯ ಕನಸು ಭಗ್ನಗೊಳ್ಳಲು ಮೋದಿ ಸರ್ಕಾರವೇ ಕಾರಣ’ ಎಂದು ಆರೋಪಿಸಿದ್ದಾರೆ.

ರಾಷ್ಟ್ರೀಯ ಮಾದರಿ ಸಮೀಕ್ಷೆ ಕಚೇರಿಯ (ಎನ್‌ಎಸ್‌ಎಸ್ಒ) ಸಮೀಕ್ಷಾ ವರದಿಯನ್ನು ಖರ್ಗೆ ಉಲ್ಲೇಖಿಸಿದ್ದಾರೆ. 2015ರಿಂದ 2023ರ ನಡುವೆ ಏಳು ವರ್ಷಗಳ ಅವಧಿಯಲ್ಲಿ ಅಸಂಘಟಿತ ವಲಯದಲ್ಲಿ 54 ಲಕ್ಷ ಉದ್ಯೋಗಗಳು ನಷ್ಟವಾಗಿವೆ ಎಂದು ಹೇಳಿದ್ದಾರೆ. 

ಸರ್ಕಾರಿ ಉದ್ಯೋಗ, ಖಾಸಗಿ ವಲಯ, ಸ್ವಯಂ ಉದ್ಯೋಗ ಅಥವಾ ಅಸಂಘಟಿತ ವಲಯವೇ ಆಗಿರಲಿ, ನಿರುದ್ಯೋಗಿಗಳನ್ನಾಗಿ ಮಾಡುವುದೇ ಮೋದಿ ಸರ್ಕಾರದ ಗುರಿಯಾಗಿದೆ ಎಂದು ಅವರು ಆರೋಪಿಸಿದ್ದಾರೆ.

RELATED ARTICLES
- Advertisment -
Google search engine

Most Popular