ದೆಹಲಿ: ಭೂಕುಸಿತ ಪೀಡಿತ ಪ್ರದೇಶಗಳಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಲು ಮತ್ತು ಪ್ರದೇಶದಲ್ಲಿ ನಡೆಯುತ್ತಿರುವ ಪರಿಹಾರ ಮತ್ತು ಪುನರ್ವಸತಿ ಪ್ರಯತ್ನಗಳನ್ನು ನಿರ್ಣಯಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೇರಳದ ವಯನಾಡ್ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಪ್ರಧಾನಿಯವರು ಭೂಕುಸಿತದ ಸಂತ್ರಸ್ತರನ್ನು ಆಸ್ಪತ್ರೆ ಮತ್ತು ಪರಿಹಾರ ಶಿಬಿರಗಳಲ್ಲಿ ಭೇಟಿ ಮಾಡುತ್ತಾರೆ.
ಇಂದು ಮಧ್ಯಾಹ್ನ ೧೨.೧೫ರ ಸುಮಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು, ವಿಪತ್ತಿನಿಂದ ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಅಲ್ಲಿ ಪೀಡಿತರಿಗೆ ಪರಿಣಾಮಕಾರಿ ಬೆಂಬಲವನ್ನು ಖಚಿತಪಡಿಸಿಕೊಳ್ಳಲು ಪ್ರಧಾನಿ ಮೋದಿ ಅವರು, ಪುನರ್ವಸತಿ ಪ್ರಯತ್ನಗಳನ್ನು ಮೇಲ್ವಿಚಾರಣೆ ಮಾಡುವ ನಿರೀಕ್ಷೆಯಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ೧೧ ಗಂಟೆಗೆ ಕಣ್ಣೂರಿಗೆ ಆಗಮಿಸಲಿದ್ದು, ಅಲ್ಲಿಂದ ವಯನಾಡಿನಲ್ಲಿ ಭೂಕುಸಿತ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆಯನ್ನು ಕೈಗೊಳ್ಳಲಿದ್ದಾರೆ. ವೈಮಾನಿಕ ಸಮೀಕ್ಷೆ ನಡೆಸಿದ ಬಳಿಕ ಪರಿಹಾರ ಶಿಬಿರ ಮತ್ತು ಸ್ಥಳೀಯ ಆಸ್ಪತ್ರೆಗೂ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಲಿದ್ದಾರೆ.