ನವದೆಹಲಿ : ಪಾಕಿಸ್ತಾನದ ವಿರುದ್ಧ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬಳಿಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ.
ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್ ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬಗ್ಗೆ ಚರ್ಚೆ ನಡೆಯಲಿದೆ.