Friday, April 11, 2025
Google search engine

HomeUncategorizedರಾಷ್ಟ್ರೀಯಇಂದು ಲೋಕಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ

ಇಂದು ಲೋಕಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ

ನವದೆಹಲಿ: ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಮೇಲೆ ಇಂದು ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ಮಾತನಾಡಲಿದ್ದಾರೆ.

ಮೋದಿ ತಮ್ಮ ಭಾಷಣದಲ್ಲಿ ಅಗ್ನಿವೀರ್‌, ಪರೀಕ್ಷಾ ಅಕ್ರಮ, ಹೊಸ ಅಪರಾಧ ಕಾನೂನು ಜಾರಿ ಸೇರಿ ಇತ್ತಿಚಿನ ಬೆಳವಣಿಗೆಯಲ್ಲಿ ಸರ್ಕಾರದ ನಡೆಯನ್ನು ಸಮರ್ಥಿಸುವ ಜೊತೆ ಜೊತೆಗೆ ವಿರೋಧ ಪಕ್ಷಗಳ ನಾಯಕರ ಟೀಕೆಗೆ ಅವರು ಉತ್ತರ ನೀಡಲಿದ್ದಾರೆ.

ವಿಪಕ್ಷ ನಾಯಕ ರಾಹುಲ್‌ ಗಾಂಧಿ ಮೋದಿ , ಬಿಜೆಪಿ, ಆರ್‌ಎಸ್‌ಎಸ್ ಗುರಿಯಾಗಿಸಿ ಭಾಷಣ ಮಾಡಿದ್ದರು. ಅಷ್ಟೇ ಅಲ್ಲದೇ ಹಿಂದೂ ಹೇಳಿಕೊಳ್ಳುವವರಿಂದ ಹಿಂಸಾಚಾರ ಎಂದು ಹೇಳಿದ್ದು ಭಾರೀ ವಿವಾದಕ್ಕೆ ಕಾರಣವಾಗಿದೆ. ರಾಹುಲ್‌ ಭಾಷಣದ ಮಧ್ಯೆ ಪ್ರಧಾನಿ ಎದ್ದು ನಿಂತು ಈ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದರು. ಮೋದಿ ಅವರು ಈ ಎಲ್ಲಾ ವಿಚಾರಗಳನ್ನು ಪ್ರಸ್ತಾಪ ಮಾಡಿ ಇಂದು ತಿರುಗೇಟು ನೀಡುವ ಸಾಧ್ಯತೆಯಿದೆ.

RELATED ARTICLES
- Advertisment -
Google search engine

Most Popular