ನವದೆಹಲಿ: ಜಿ 20 ಸದಸ್ಯ ರಾಷ್ಟ್ರಗಳ ಅನುಮೋದನೆಯ ನಂತರ, ಆಫ್ರಿಕನ್ ಯೂನಿಯನ್ ಕೂಡ ಸದಸ್ಯ ರಾಷ್ಟ್ರಗಳ ಶಾಶ್ವತ ಸದಸ್ಯತ್ವವನ್ನು ಪಡೆಯುತ್ತಿದೆ ಮತ್ತು ಯುರೋಪಿಯನ್ ಒಕ್ಕೂಟದಲ್ಲಿಯೂ ಇದೇ ಸ್ಥಾನಮಾನವನ್ನು ಪಡೆಯುತ್ತದೆ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದರು. ಜಿ 20 ಶೃಂಗಸಭೆಯ ಉದ್ಘಾಟನಾ ಭಾಷಣ ಮಾಡಿದ ಅವರು, ಭಾರತದ ಗಮನವು ಮಾನವ ಕೇಂದ್ರಿತ ಮತ್ತು ಅಂತರ್ಗತ ಅಭಿವೃದ್ಧಿಯ ಮೇಲಿದೆ ಎಂದು ಹೇಳಿದರು. ಶೃಂಗಸಭೆಯನ್ನು ಅವರು ಜನರ ಜಿ 20 ಎಂದು ಬಣ್ಣಿಸಿದರು.
ಮೊರಾಕೊದಲ್ಲಿ ಸಂಭವಿಸಿದ ಭೂಕಂಪದ ಬಗ್ಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದರು. ಸಂತ್ರಸ್ತರ ಬಗ್ಗೆ ಸಹಾನುಭೂತಿ ವ್ಯಕ್ತಪಡಿಸಿದ ಮೋದಿ, ಇಡೀ ಜಾಗತಿಕ ಸಮುದಾಯವು ಮೊರಾಕೊದ ಜನರೊಂದಿಗೆ ನಿಂತಿದೆ ಎಂದು ಹೇಳಿದರು. ಎಲ್ಲಾ ಗಾಯಾಳುಗಳು ಆದಷ್ಟು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇವೆ. ಈ ಕಷ್ಟದ ಸಮಯದಲ್ಲಿ ಮೊರಾಕೊಗೆ ಸಾಧ್ಯವಿರುವ ಎಲ್ಲ ನೆರವು ನೀಡಲು ಭಾರತ ಸಿದ್ಧವಾಗಿದೆ ಎಂದು ಮೋದಿ ಹೇಳಿದರು.
ಆಫ್ರಿಕನ್ ಯೂನಿಯನ್ ಸದಸ್ಯಸತ್ವದ ಬಗ್ಗೆ ಪ್ರಸ್ತಾಪಿಸಿದ ಮೋದಿ, ನಿಮ್ಮೆಲ್ಲರ ಒಪ್ಪಿಗೆಯೊಂದಿಗೆ ಆಫ್ರಿಕನ್ ಯೂನಿಯನ್ ಇಂದಿನಿಂದ ಜಿ20 ಖಾಯಂ ಸದಸ್ಯತ್ವ ಪಡೆಯಲಿದೆ ಎಂದು ಘೋಷಿಸಿದರು. ಇದಕ್ಕೆ ಎಲ್ಲ ನಾಯಕರು ಚಪ್ಪಾಳೆಯೊಂದಿಗೆ ಸಹಮತ ವ್ಯಕ್ತಪಡಿಸಿದರು. ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಆಫ್ರಿಕನ್ ಯೂನಿಯನ್ ಅಧ್ಯಕ್ಷ ಅಜಾಲಿ ಅಸ್ಸೌಮಾನಿ ಅವರನ್ನು ವೇದಿಕೆಗೆ ಕರೆತಂದರು ಮತ್ತು ಪ್ರಧಾನಿ ಮೋದಿ ಅವರನ್ನು ತಬ್ಬಿ ಅಭಿನಂದಿಸಿದರು.