ಬೆಂಗಳೂರು: ಆರ್‌ಸಿಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತದಿಂದ ನಡೆದ ಅವಘಡಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಸಂತಾಪ ಸೂಚಿಸಿದ್ದಾರೆ.
ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಬೆಂಗಳೂರಿನಲ್ಲಿ ನಡೆದಿರುವುದು ನಿಜಕ್ಕೂ ಹೃದಯವಿದ್ರಾವಕ ಘಟನೆ. ಈ ದುರಂತದಲ್ಲಿ ಹಲವರು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದಾರೆ. ಅವರ ಬಗ್ಗೆ ಕನಿಕರವಿದೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.