Tuesday, April 22, 2025
Google search engine

HomeUncategorizedರಾಷ್ಟ್ರೀಯಕ್ರಿಸ್ ಮಸ್’ಗೆ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು

ಕ್ರಿಸ್ ಮಸ್’ಗೆ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು

ಕ್ರಿಸ್ ಮಸ್ ಹಬ್ಬದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಅನೇಕ ಗಣ್ಯರು ಕ್ರಿಸ್ ಮಸ್ ಹಬ್ಬದ ಶುಭಾಶಯ ತಿಳಿಸಿದ್ದಾರೆ.

ಪ್ರಧಾನಿ ಮೋದಿ ಅವರು ಸಾಮಾಜಿಕ ಜಾಲತಾಣಎಕ್ಸ್​​ ಮೂಲಕ ಶುಭಾಶಯಗಳನ್ನು ತಿಳಿಸಿದ್ದು, ಎಲ್ಲರಿಗೂ ಕ್ರಿಸ್‌ಮಸ್ ಶುಭಾಶಯಗಳು! ಈ ಹಬ್ಬವು ಎಲ್ಲರಿಗೂ ಸಂತೋಷ, ಶಾಂತಿ ಮತ್ತು ಸಮೃದ್ಧಿಯನ್ನು ತರಲಿ. ಕ್ರಿಸ್‌ ಮಸ್ ಸಂಕೇತಿಸುವ ಸೌಹಾರ್ದತೆ ಮತ್ತು ಸಹಾನುಭೂತಿಯ ಹಬ್ಬವನ್ನು ಆಚರಿಸೋಣ ಮತ್ತು ಎಲ್ಲರೂ ಸಂತೋಷ ಮತ್ತು ಆರೋಗ್ಯಕರವಾಗಿರುವ ಜಗತ್ತಿಗಾಗಿ ಕೆಲಸ ಮಾಡೋಣ ಎಂದು ಶುಭ ಹಾರೈಸಿದ್ದಾರೆ.

ದೇಶದ ಎಲ್ಲ ರಾಜ್ಯಗಳಲ್ಲೂ, ಸಂಭ್ರಮದಿಂದ ಹಬ್ಬವನ್ನು ಆಚರಣೆ ಮಾಡುಕೊಳ್ಳುತ್ತಿದ್ದಾರೆ. ಕ್ರೈಸ್ತ ಸಮುದಾಯದ ಜನ ಚರ್ಚ್​​​​​ಗೆ ತೆರಲಿಯಲ್ಲಿ ದೇವರಿಗೆ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಇನ್ನು ದೆಹಲಿಯ ಸೇಕ್ರೆಡ್ ಹಾರ್ಟ್ ಕ್ಯಾಥೆಡ್ರಲ್ ಕ್ಯಾಥೋಲಿಕ್ ಚರ್ಚ್‌ನಲ್ಲಿ ಮಧ್ಯರಾತ್ರಿ ಸಾಮೂಹಿಕ ಪ್ರಾರ್ಥನೆ ನಡೆಯಿತು. ಬೆಂಗಳೂರಿನ ಸೇಂಟ್ ಫ್ರಾನ್ಸಿಸ್ ಕ್ಸೇವಿಯರ್ ಕ್ಯಾಥೆಡ್ರಲ್‌ ನಲ್ಲಿಯೂ ಪ್ರಾರ್ಥನೆಗಳು ನಡೆಯುತ್ತಿದೆ.

ಡಿಸೆಂಬರ್ 25 ರಂದು ಕ್ರಿಸ್‌ ಮಸ್ ​​ನ್ನು ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವಾಗಿ ಆಚರಿಸುತ್ತಾರೆ.

ಶುಭಾಶಯ ತಿಳಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಎಲ್ಲರಿಗೂ ಕ್ರಿಸ್ಮಸ್ ಶುಭಾಶಯಗಳು! ಈ ಸಂತೋಷದ ಹಬ್ಬವು ಸಾಮರಸ್ಯ, ಪ್ರೀತಿ ಮತ್ತು ಸಹಾನುಭೂತಿಯ ಸಂದೇಶವನ್ನು ಹರಡುತ್ತದೆ. ನಾವು ಯೇಸುಕ್ರಿಸ್ತನ ಬೋಧನೆಗಳನ್ನು ನೆನಪಿಸಿಕೊಳ್ಳೋಣ ಮತ್ತು ಎಲ್ಲರ ಯೋಗಕ್ಷೇಮ ಮತ್ತು ಸಮೃದ್ಧಿಗಾಗಿ ಒಟ್ಟಾಗಿ ಕೆಲಸ ಮಾಡಲು ಸಂಕಲ್ಪ ಮಾಡೋಣ ಎಂದು ಎಕ್ಸ್​​ನಲ್ಲಿ ಬರೆದುಕೊಂಡಿದ್ದಾರೆ.

ಶುಭಾಶಯ ತಿಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ ಅವರು ಕೂಡ ಕ್ರಿಸ್‌ ಮಸ್​​ ಶುಭಾಶಯ ತಿಳಿಸಿದ್ದಾರೆ. ಏಸು ಕ್ರಿಸ್ತನ ಜೀವನ ಸಂದೇಶಗಳಾದ ಪ್ರೀತಿ, ಕ್ಷಮೆ, ದಯಾಗುಣಗಳು ಎಲ್ಲರ ಬದುಕಿನ ದಾರಿದೀಪವಾಗಲಿ. ಸುಖ, ಶಾಂತಿ, ಸಮೃದ್ಧಿ ನಾಡನ್ನು ತುಂಬಲಿ ಎಂದು ಈ ಶುಭ ಸಂದರ್ಭದಲ್ಲಿ ಹಾರೈಸುತ್ತೇನೆ ಎಂದು ಎಕ್ಸ್​​​​ ಶುಭಾಶಯಗಳನ್ನು ತಿಳಿಸಿದ್ದಾರೆ.

ಶುಭಾಶಯ ಕೋರಿದ ಬಿ ವೈ ವಿಜಯೇಂದ್ರ

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಕ್ರಿಸ್‌ಮಸ್​​ಗೆ ಶುಭಾಶಯ ತಿಳಿಸಿದ್ದಾರೆ. “ಮಾನವ ಜಗತ್ತಿಗೆ ಅಹಿಂಸೆಯ ಮಹತ್ವ ತಿಳಿಸಿ ಶಾಂತಿ ಸಂದೇಶದ ಸಾರ ತಿಳಿಸಿದ ಯೇಸು ಕ್ರಿಸ್ತರನ್ನು ಈ ಪವಿತ್ರ ದಿನದಂದು ಸ್ಮರಿಸೋಣ. ನಾಡಿನ ಸಮಸ್ತ ಕ್ರೈಸ್ತ ಬಾಂಧವರಿಗೆ ಕ್ರಿಸ್ ಮಸ್ ಹಬ್ಬದ ಹಾರ್ದಿಕ ಶುಭಾಶಯಗಳು. ಈ ಹಬ್ಬವು ನಿಮ್ಮೆಲ್ಲರ ಬಾಳಿನಲ್ಲಿ ಸಂತೋಷ, ಉತ್ತಮ ಆರೋಗ್ಯ ನೆಮ್ಮದಿಯನ್ನು ಹೊತ್ತುತರಲೆಂದು ಶುಭ ಹಾರೈಸುತ್ತೇನೆ ಎಂದು ಎಕ್ಸ್​​​ನಲ್ಲಿ ತಿಳಿಸಿದ್ದಾರೆ.

ಕ್ರಿಸ್‌ ಮಸ್​​ ಗೆ ಶುಭಾಶಯ ಕೋರಿದ ಮಾಜಿ ಮುಖ್ಯಮಂತ್ರಿ ಹೆಚ್​​​​.ಡಿ ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ ಅವರು ಕ್ರಿಸ್​​​ ಮಸ್​​​ ಹಬ್ಬ ಎಕ್ಸ್​​​ ಮೂಲಕ ಶುಭಾಶಯ ತಿಳಿಸಿದ್ದಾರೆ. ನಾಡಿನ ಸಮಸ್ತ ಜನತೆಗೆ ಪವಿತ್ರ ಕ್ರಿಸ್ಮಸ್ ಹಬ್ಬದ ಹಾರ್ದಿಕ ಶುಭಾಶಯಗಳು. ಈ ಹಬ್ಬವು ಭಕ್ತಿ, ಸೌಹಾರ್ದತೆಯ ಸಂಗಮವಾಗಿದ್ದು, ಯೇಸು ಕ್ರಿಸ್ತರ ಜನ್ಮದಿನವಾದ ಈ ದಿನ ಪ್ರತಿಯೊಬ್ಬರಿಗೂ ಶಾಂತಿ, ಸಹಬಾಳ್ವೆ ಹಾಗೂ ಸಹಿಷ್ಣುತೆಯಿಂದ ಜೀವಿಸಲು ಪ್ರೇರಣೆಯಾಗಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.

RELATED ARTICLES
- Advertisment -
Google search engine

Most Popular