Friday, April 18, 2025
Google search engine

Homeದೇಶಅಮೆರಿಕಕ್ಕೆ ಪ್ರಯಾಣ ಬೆಳೆಸಿದ ಪ್ರಧಾನಿ ನರೇಂದ್ರ ಮೋದಿ

ಅಮೆರಿಕಕ್ಕೆ ಪ್ರಯಾಣ ಬೆಳೆಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಅಮೆರಿಕ ಮತ್ತು ಈಜಿಪ್ಟ್ ರಾಷ್ಟ್ರಗಳ ಪ್ರವಾಸಕ್ಕೆ  ತೆರಳಿದ್ದಾರೆ.

ಅಮೆರಿಕ ಪ್ರವಾಸವು ಜೂ. 21ರಂದು ಪ್ರಾರಂಭವಾಗಿ ಜೂ. 24ಕ್ಕೆ ಕೊನೆಗೊಳ್ಳಲಿದೆ, ಅಲ್ಲಿಂದ ಈಜಿಪ್ಟ್​ ಗೆ ಪ್ರಧಾನಿ ಮೋದಿ ಪ್ರವಾಸ ಕೈಗೊಳ್ಳಲಿದ್ದಾರೆ.

ಅಮೆರಿಕಕ್ಕೆ ತೆರಳುವ ಮುನ್ನ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ನ್ಯೂಯಾರ್ಕ್ ಸಿಟಿ ಮತ್ತು ವಾಷಿಂಗ್ಟನ್ ಡಿಸಿಯಲ್ಲಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

ಪ್ರಧಾನಿ ಮೋದಿಯವರಿಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಆಹ್ವಾನ ನೀಡಿದ್ದರು. ವಿಶ್ವಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಅಧ್ಯಕ್ಷ ಜೋ ಬೈಡನ್ ಅವರನ್ನು ಭೇಟಿ ಮಾಡಿ ಉನ್ನತ ಮಟ್ಟದ ಮಾತುಕತೆ ನಡೆಸಲಿದ್ದಾರೆ. ವ್ಯಾಪಾರ ,ತಂತ್ರಜ್ಞಾನ , ವಾಣಿಜ್ಯ ಸೇರಿದಂತೆ ಪ್ರಮುಖ ಕ್ಷೇತ್ರಗಳಲ್ಲಿ ಭಾರತ-ಅಮೆರಿಕ ಬಾಂಧವ್ಯ ಮತ್ತಷ್ಟು ಬಲವರ್ಧನೆಯಾಗಲಿದೆ.

ಜೂ. 22ರಂದು ಯುಎಸ್ ಕಾಂಗ್ರೆಸ್ ನ ಜಂಟಿ ಅಧಿವೇಶನ ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ.

ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಜೂ. 24 ರಿಂದ 25ಕ್ಕೆ ಕೈರೋಗೆ ಪ್ರಯಾಣಿಸಲಿದ್ದಾರೆ.

ಜನವರಿಯಲ್ಲಿ ಭಾರತದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಫತ್ತಾಹ್ ಎಲ್ – ಸಿಸಿ ತಮ್ಮ ದೇಶಕ್ಕೆ ಆಗಮಿಸುವಂತೆ ಪ್ರಧಾನಿ ಮೋದಿ ಅವರಿಗೆ ಆಹ್ವಾನ ನೀಡಿದ್ದರು.

RELATED ARTICLES
- Advertisment -
Google search engine

Most Popular