Friday, April 11, 2025
Google search engine

Homeವಿದೇಶರಷ್ಯಾ -ಉಕ್ರೇನ್ ಯುದ್ಧದ ಬಳಿಕ ಪ್ರಧಾನಿ ನರೇಂದ್ರ ಮೋದಿ ಉಕ್ರೇನ್‌ಗೆ ಭೇಟಿ

ರಷ್ಯಾ -ಉಕ್ರೇನ್ ಯುದ್ಧದ ಬಳಿಕ ಪ್ರಧಾನಿ ನರೇಂದ್ರ ಮೋದಿ ಉಕ್ರೇನ್‌ಗೆ ಭೇಟಿ

ನವದೆಹಲಿ: ರಷ್ಯಾ ಜೊತೆಗಿನ ಯುದ್ಧದ ನಂತರ ಈ ತಿಂಗಳ ಅಂತ್ಯಕ್ಕೆ ಉಕ್ರೇನ್‌ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ.

ಆ.೨೨ ಅಥವಾ ಆ.೨೩ ರಂದು ಮೋದಿ ಉಕ್ರೇನ್‌ಗೆ ಭೇಟಿ ನೀಡುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಭೇಟಿಯ ಕಾರಣ ಇನ್ನೂ ಬಹಿರಂಗಗೊಂಡಿಲ್ಲ. ಉಕ್ರೇನ್ ಭೇಟಿಯನ್ನು ವಿದೇಶಾಂಗ ಸಚಿವಾಲಯ ಅಧಿಕೃತವಾಗಿ ತಿಳಿಸಿದ್ದು ದಿನಾಂಕ ಇನ್ನಷ್ಟೇ ಪ್ರಕಟವಾಗಬೇಕಿದೆ.

ಪ್ರವಾಸದ ವಿವರಗಳನ್ನು ನಂತರ ತಿಳಿಸಲಾಗುವುದು ಎಂಬುವುದಾಗಿ ವಿದೇಶಾಂಗ ಸಚಿವಾಲಯ ಉಲ್ಲೇಖಿಸಿದೆ. ಉಕ್ರೇನ್‌ಗೆ ಭೇಟಿ ನೀಡಿದ ಬಳಿಕ ಮೋದಿ ಪೋಲೆಂಡ್‌ಗೆ ಭೇಟಿ ನೀಡಲಿದ್ದಾರೆ. ಜುಲೈನಲ್ಲಿ ಪ್ರಧಾನಿ ೨೨ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಗಾಗಿ ಮಾಸ್ಕೋ ಗೆ ತೆರಳಿದ್ದರು.

RELATED ARTICLES
- Advertisment -
Google search engine

Most Popular