Friday, April 4, 2025
Google search engine

Homeರಾಜ್ಯಗಾಂಧಿ ಭಾರತ ಸಮಾವೇಶಕ್ಕೆ ಬೆಳಗಾವಿಗೆ ಪ್ರಿಯಾಂಕ ಗಾಂಧಿ ಆಗಮನ : ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತ

ಗಾಂಧಿ ಭಾರತ ಸಮಾವೇಶಕ್ಕೆ ಬೆಳಗಾವಿಗೆ ಪ್ರಿಯಾಂಕ ಗಾಂಧಿ ಆಗಮನ : ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತ

ಬೆಳಗಾವಿ : ಬೆಳಗಾವಿಯಲ್ಲಿ ಇಂದು 1924ರಲ್ಲಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮಕ್ಕೆ ಪ್ರಿಯಾಂಕಾ ಗಾಂಧಿ ಆಗಮಿಸಿದ್ದಾರೆ.

ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಬೆಳಗಾವಿಗೆ ತಲುಪಿದರು. ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬರಮಾಡಿಕೊಂಡರು. ಅವರು ಇಲ್ಲಿ ಪಕ್ಷದ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್’ ರ್‍ಯಾಲಿಯಲ್ಲಿ ಭಾಗವಹಿಸಲಿದ್ದಾರೆ.

ಗಾಂಧಿ ಭಾರತ ಬೃಹತ್ ರ್‍ಯಾಲಿಯಲ್ಲಿ ಸುಮಾರು ಎರಡು ಲಕ್ಷಕ್ಕೂ ಅಧಿಕ ಜನ ಭಾಗವಹಿಸುವ ಸಾಧ್ಯತೆ ಇದೆ. ಅಧಿವೇಶನದಲ್ಲಿ ಭಾಗವಹಿಸಲು ದೇಶದ ವಿವಿಧ ಭಾಗಗಳಿಂದ ಕಾಂಗ್ರೆಸ್ ನಾಯಕರು ದಂಡೇ ಹರಿದು ಬಂದಿದೆ.

ಎಎಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಸಂಸದೆ ಪ್ರಿಯಾಂಕಾ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ನಾಯಕರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

RELATED ARTICLES
- Advertisment -
Google search engine

Most Popular