Wednesday, April 9, 2025
Google search engine

Homeರಾಜಕೀಯಪಿರಿಯಾಪಟ್ಟಣ: ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಪಿರಿಯಾಪಟ್ಟಣ: ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ವರದಿ: ಸತೀಶ್ ಆರಾಧ್ಯ

ಪಿರಿಯಾಪಟ್ಟಣ: ಪಕ್ಷ ಶಕ್ತಿಯುತವಾಗಿ ಸಂಘಟನೆಯಿಂದ ಅಧಿಕಾರ ಹಿಡಿಯಲು ಸದಸ್ಯತ್ವ ಅಭಿಯಾನ ಸಹಕಾರಿಯಾಗಲಿದೆ ಎಂದು ಮಾಜಿ ಶಾಸಕರಾದ ಎಚ್.ಸಿ ಬಸವರಾಜು ಅಭಿಪ್ರಾಯಪಟ್ಟರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ನಡೆದ ಬಿಜೆಪಿ ಸದಸ್ಯ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು, ಸದೃಢ ಮತ್ತು ಸುಭದ್ರ ಆಡಳಿತ ನೀಡಲು ಕಾರ್ಯಕರ್ತರ ಬಲವೇ ಅತಿ ಮುಖ್ಯವಾಗಿದ್ದು ಅದನ್ನು ಅಭಿಯಾನದಲ್ಲಿ ಹೆಚ್ಚಿಸಿಕೊಳ್ಳುವ ಮೂಲಕ ಬಿಜೆಪಿ ಪಕ್ಷ ಸಂಘಟನೆಗೆ ಮುಂದಾಗಿದೆ ಎಂದರು.

ಬಿಜೆಪಿ ತಾಲೂಕು ಅಧ್ಯಕ್ಷ ಕೊಪ್ಪ ರಾಜೇಂದ್ರ ಅವರು ಮಾತನಾಡಿ ಈ ಹಿಂದೆ ಪಿರಿಯಾಪಟ್ಟಣ ತಾಲೂಕಿನಲ್ಲಿ ಬಿಜೆಪಿ ಪಕ್ಷದ ಶಾಸಕರಿದ್ದು ಮತ್ತೆ ತಾಲೂಕಿನಲ್ಲಿ ಪಕ್ಷವನ್ನು ಬೂತ್ ಮಟ್ಟದಿಂದ ಸಂಘಟಿಸಿ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಸದಸ್ಯತ್ವ ಅಭಿಯಾನ ಹಮ್ಮಿಕೊಂಡಿದ್ದು ಕೇಂದ್ರದಲ್ಲಿನ ಪ್ರಧಾನಿ ನರೇಂದ್ರ ಮೋದಿ ಅವರ ಜನಪರ ಕಾರ್ಯಗಳನ್ನು ಕಾರ್ಯಕರ್ತರು ಪ್ರತಿ ಮನೆಮನೆಗೆ ತಲುಪಿಸಿ ಪಕ್ಷ ಸಂಘಟನೆಗೆ ಒತ್ತು ನೀಡಬೇಕು ಎಂದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿರಣ್ ಜಯರಾಮೇಗೌಡ ಮಾತನಾಡಿ 12 ಕೋಟಿಗೂ ಹೆಚ್ಚು ಸದಸ್ಯರನ್ನು ಹೊಂದಿರುವ ಬಿಜೆಪಿ ಪಕ್ಷವು ವಿಶ್ವದ ಅತ್ಯಂತ ದೊಡ್ಡ ರಾಜಕೀಯ ಪಕ್ಷವಾಗಿ ಹೊರಹೊಮ್ಮಿದೆ ಆ ಸಾಧನೆಯನ್ನು ಮುಂದುವರಿಸಿಕೊಂಡು ಹೋಗೋಣ, ಕೆಲ ವಿದೇಶಿ ಶಕ್ತಿಗಳು ದೇಶದಲ್ಲಿ ಅಶಾಂತಿ ಮತ್ತು ಅನುಮಾನ ಸೃಷ್ಟಿಸಿ ದೇಶದ ಅಭಿವೃದ್ಧಿಗೆ ಅಡ್ಡಗಾಲು ಹಾಕುತ್ತಿವೆ ಅದನ್ನು ಸಮರ್ಥವಾಗಿ ಎದುರಿಸಲು ಬಿಜೆಪಿಯ ಕಾರ್ಯಕರ್ತರ ಪಡೆ ಸದೃಢವಾಗಬೇಕು ಈ ನಿಟ್ಟಿನಲ್ಲಿ ಸದಸ್ಯತ್ವ ಅಭಿಯಾನ ಸಹಕಾರಿಯಾಗಲಿದೆ ಎಂದರು.

ಈ ವೇಳೆ ಸದಸ್ಯತ್ವ ಅಭಿಯಾನ ಪರಿಚಯ ಪುಸ್ತಕ ಬಿಡುಗಡೆ ಮಾಡಲಾಯಿತು.

ಈ ಸಂದರ್ಭ ಜಿಲ್ಲಾ ಖಜಾಂಚಿ ಚಂದ್ರಶೇಖರ್, ತಾಲೂಕು ಪ್ರಧಾನ ಕಾರ್ಯದರ್ಶಿಗಳಾದ ಚನ್ನಬಸವರಾಜು, ರವಿ, ವಿವಿಧ ಮೋರ್ಚಾ ಪದಾಧಿಕಾರಿಗಳಾದ ಆರ್.ಟಿ ಸತೀಶ್, ಕೌಲನಹಳ್ಳಿ ಸೋಮಶೇಖರ್, ಎಂ.ಎಂ ರಾಜೇಗೌಡ, ನಳಿನಿ, ಪಿ.ಜೆ ರವಿ, ಟಿ.ರಮೇಶ್, ಗಾಯಿತ್ರಿ, ಜಿ.ಸಿ ವಿಕ್ರಮ್ ರಾಜ್, ಲೋಕಪಾಲಯ್ಯ, ರಾಘವೇಂದ್ರ ಸೇರಿದಂತೆ ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು.

RELATED ARTICLES
- Advertisment -
Google search engine

Most Popular