ಪಿರಿಯಾಪಟ್ಟಣ: ಭೀಮ್ ಆರ್ಮಿ ಕರ್ನಾಟಕ ಏಕತಾ ಮಿಷನ್ ಮೈಸೂರು ಜಿಲ್ಲೆ ಹಾಗೂ ಪಿರಿಯಾಪಟ್ಟಣ ತಾಲೂಕು ಶಾಖೆ ವತಿಯಿಂದ ಮಾ.21ರಂದು ಪಟ್ಟಣದ ಡಿ. ದೇವರಾಜ ಅರಸು ಭವನದಲ್ಲಿ ಆಯೋಜಿಸಿದ್ದ ತಾಲೂಕಿನ ಪರಿಶಿಷ್ಟ ಸಮುದಾಯದ ಪುರಸಭೆ ಮತ್ತು ಪಂಚಾಯತಿಗಳಲ್ಲಿ ಚುನಾಯಿತ ಜನಪ್ರತಿನಿಧಿಗಳಿಗಳ ಅಭಿನಂದನಾ ಸಮಾರಂಭ ಮತ್ತು ವಿಚಾರ ಸಂಕೀರ್ಣ ಕಾರ್ಯಕ್ರಮವನ್ನು ಚುನಾವಣಾ ನೀತಿ ಸಂಹಿತೆ ಹಿನ್ನೆಲೆ ಮುಂದೂಡಲಾಗಿದೆ ಎಂದು ಭೀಮ್ ಆರ್ಮಿ ಮೈಸೂರು ಜಿಲ್ಲಾಧ್ಯಕ್ಷರಾದ ಕೆ.ಬಿ ಗಿರೀಶ್ ತಿಳಿಸಿದ್ದಾರೆ.
ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಯೋಜಿಸಲು ತಿಂಗಳ ಕಾಲ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಸೇರಿ ಪೂರ್ವಸಿದ್ಧತೆ ಕೈಗೊಂಡು ತಾಲೂಕಿನಾದ್ಯಂತ ಪ್ರಚಾರ ಮಾಡಲಾಗಿತ್ತು. ಆದರೆ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆ ಕಾರ್ಯಕ್ರಮಕ್ಕೆ ಚುನಾಯಿತ ಜನಪ್ರತಿನಿಧಿಗಳು ಆಗಮಿಸುವುದರಿಂದ ಸಂವಿಧಾನಕ್ಕೆ ಗೌರವ ನೀಡಿ ಕಾರ್ಯಕ್ರಮ ಮುಂದೂಡಲಾಗಿದೆ.
ಚುನಾವಣೆ ಮುಗಿದ ಬಳಿಕ ಜೂನ್ ತಿಂಗಳಲ್ಲಿ ದಿನಾಂಕ ನಿಗದಿಪಡಿಸಿ ಮತ್ತೊಮ್ಮೆ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಲ್ಲರ ಸಹಕಾರವಿರಲಿ ಎಂದು ಕೋರಿದರು. ಈ ಸಂದರ್ಭ ಭೀಮ್ ಆರ್ಮಿ ಸಂಘಟನೆಯ ತಾಲೂಕು ಗೌರವಾಧ್ಯಕ್ಷ ಚೌತಿ ಮಲ್ಲಣ್ಣ, ಸಂಘಟನಾ ಕಾರ್ಯದರ್ಶಿ ನರಳಾಪುರ ಚಿನ್ನಸ್ವಾಮಿ, ಪ್ರಧಾನ ಕಾರ್ಯದರ್ಶಿ ರಮೇಶ್, ಸಂಚಾಲಕರಾದ ಶೇಖರ್, ಕಾರ್ಯಧ್ಯಕ್ಷ ಶಿವಕುಮಾರ್ ಇದ್ದರು.