ರಾಮನಗರ: ರಾಷ್ಟೀಯ ಗ್ರಂಥಾಲಯ ಸಪ್ತಾಹ ೨೦೨೩ರ ಅಂಗವಾಗಿ ಜಿಲ್ಲಾ ಕೇಂದ್ರ ಗ್ರಂಥಾಲಯ ಮತ್ತು ಜಿಲ್ಲಾ ಪಂಚಾಯತ್ ರಾಮನಗರ ಇವರ ಸಹಯೋಗದಲ್ಲಿ ಸಿಬ್ಬಂದಿ ಸೇವಾ ಪ್ರಶಸ್ತಿ ಮತ್ತು ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಣೆ ಸಮಾರಂಭವನ್ನು ಆಯೋಜಿಸಲಾಗಿತ್ತು.
ಸಮಾರಂಭವನ್ನು ಅಪರ ಜಿಲ್ಲಾಧಿಕಾರಿ ಶಿವಾನಂದ ಮೂರ್ತಿ ಅವರು ಉದ್ಘಾಟಿಸಿದರು. ಸಮಾರಂಭದಲ್ಲಿ ಉಪಕಾರ್ಯದರ್ಶಿ ಚಿಕ್ಕಸುಬ್ಬಯ್ಯ,ಚನ್ನಪಟ್ಟಣ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶಿವಕುಮಾರ್, ಡಾ.ಭೈರಮಂಗಲ ರಾಮೇಗೌಡ, ವಕೀಲ ನಂಜಪ್ಪ ಕಾಳೇಗೌಡ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸತೀಶ್, ಶಿಕ್ಷಣ ಫೌಂಡೇಶನ್ ಸಂಸ್ಥೆಯ ಎ.ಜಿ.ಎಂ ಅಶ್ವಥ್, ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ ಮತ್ತು ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯ ಅಧಿಕಾರಿ ಚನ್ನಕೇಶವ ಹೆಚ್.ಆರ್ ಉಪಸ್ಥಿತರಿದ್ದರು.