Saturday, April 19, 2025
Google search engine

Homeರಾಜ್ಯನಾಗಮಂಗಲ ಕೋಮುಗಲಭೆ ವೇಳೆ ಪಾಕಿಸ್ತಾನ ಪರ ಘೋಷಣೆ: ತನಿಖೆಗೆ ಆರ್.ಅಶೋಕ್ ಒತ್ತಾಯ

ನಾಗಮಂಗಲ ಕೋಮುಗಲಭೆ ವೇಳೆ ಪಾಕಿಸ್ತಾನ ಪರ ಘೋಷಣೆ: ತನಿಖೆಗೆ ಆರ್.ಅಶೋಕ್ ಒತ್ತಾಯ

ಬೆಂಗಳೂರು: ನಾಗಮಂಗಲ ಕೋಮುಗಲಭೆಯ ವೇಳೆಯಲ್ಲಿ ಪಾಕ್ ಪರ ಕಿಡಿಗೇಡಿಗಳು ಘೋಷಣೆ ಕೂಗಿರುವುದಾಗಿ ವಿಪಕ್ಷ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೇ ತನಿಖೆಗೆ ಗೃಹ ಸಚಿವರಲ್ಲಿ ಒತ್ತಾಯಿಸಿದ್ದಾರೆ.

ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆಯಲ್ಲಿ ಮೂವರು ಕಿಡಿಗೇಡಿಗಳು ಪಾಕಿಸ್ತಾನ ಜಿಂದಾಬಾದ್ ಘೋಷಣೆಗಳು ಕೂಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳ ಹೇಳುತ್ತಿದ್ದು, ಈ ಕೋಮುದಳ್ಳುರಿಯಲ್ಲಿ ನಿಷೇಧಿತ ಸಂಘಟನೆಗಳ ಕೈವಾಡವಿರುವ ಅನುಮಾನ ಮತ್ತಷ್ಟು ಗಟ್ಟಿಯಾಗಿತ್ತಿದೆ ಎಂಬುದಾಗಿ ಹೇಳಿದ್ದಾರೆ.

ಇದರ ಬೆನ್ನಲ್ಲೇ ಚಿಕ್ಕಮಗಳೂರಲ್ಲಿ ಬೈಕ್‌ನಲ್ಲಿ ಪ್ಯಾಲೆಸ್ತೀನ್ ಧ್ವಜ ಹಿಡಿದಿರುವ ಪುಂಡಾಟ, ದಾವಣಗೆರೆಯ ಗಾಂಧಿನಗರ ಹಾಗೂ ಅಹ್ಮದ್ ನಗರಗಳಲ್ಲಿ ಹಿಂದೂ ಯುವಕರು ಬಾವುಟ ಕಟ್ಟಿದ್ದಕ್ಕೆ ಮತಾಂಧ ಪುಂಡರು ಅವರ ಮೇಲೆ ಹಲ್ಲೆ ಮಾಡಿರುವುದು, ಇವನ್ನೆಲ್ಲಾ ಗಮನಿಸುತ್ತಿದ್ದರೆ ಈ ಪ್ರಚೋದನಕಾರಿ ಘಟನೆಗಳು ಗಣೇಶೋತ್ಸವವನ್ನೇ ಟಾರ್ಗೆಟ್ ಮಾಡಿರುವಂತಿದೆ ಎಂದಿದ್ದಾರೆ.

ಅಂತಾರಾಜ್ಯ, ಅಂತರಾಷ್ಟ್ರೀಯ ನಂಟು ಹೊಂದಿರುವ ಇಂತಹ ವ್ಯವಸ್ಥಿತ, ಪ್ರಾಯೋಜಿತ, ಜಾಲವನ್ನ ಬೇಧಿಸುವುದು ಸ್ಥಳೀಯ ಪೊಲೀಸರಿಂದ ಅಸಾಧ್ಯವಾಗಿದ್ದು, ಕೂಡಲೇ ಈ ಪ್ರಕರಣಗಳನ್ನ ಓIಂ ತನಿಖೆಗೆ ಒಪ್ಪಿಸಬೇಕು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹಾಗು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನ ಒತ್ತಾಯಿಸಿದ್ದಾರೆ.

RELATED ARTICLES
- Advertisment -
Google search engine

Most Popular