Friday, April 11, 2025
Google search engine

Homeರಾಜ್ಯಸುದ್ದಿಜಾಲನಿಷೇಧಿತ ಪ್ಲಾಸ್ಟಿಕ್ ವಶ: ದಂಡ ವಸೂಲಿ

ನಿಷೇಧಿತ ಪ್ಲಾಸ್ಟಿಕ್ ವಶ: ದಂಡ ವಸೂಲಿ

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಸೋಮವಾರ ನಿಷೇದಿತ ಪ್ಲಾಸ್ಟಿಕ್ಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ದಾಳಿ ನಡೆಸಿ 120 ಕೆ.ಜಿ ನಿಷೇಧಿತ ಪ್ಲಾಸ್ಟಿಕ್ಗಳನ್ನು ವಶಪಡಿಸಿಕೊಂಡು, 14,000 ರೂ. ದಂಡ ವಸೂಲಿ ಮಾಡಲಾಯಿತು ಹಾಗೂ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬದಲಿಗೆ ಮರುಬಳಕೆಯ ವಸ್ತುಗಳನ್ನು ಬಳಸುವಂತೆ ಸೂಚನೆ ನೀಡಲಾಯಿತು.

ದಾಳಿಯಲ್ಲಿ ನಗರಸಭೆಯ ಪೌರಾಯುಕ್ತರು, ಪರಿಸರ ಅಭಿಯಂತರರು, ಹಿರಿಯ ಆರೋಗ್ಯ ನಿರೀಕ್ಷಕರು, ಕಿರಿಯ ಆರೋಗ್ಯ ನಿರೀಕ್ಷಕರು, ಸ್ಯಾನೀಟರಿ ಸೂಪರ್ವೈಸರ್ನವರು ಹಾಗೂ ಪೌರಕಾರ್ಮಿಕರು ಭಾಗವಹಿಸಿದ್ದರು. ಪ್ರಸಕ್ತ ಸಾಲಿನ ಜುಲೈನಿಂದ ಈವರೆಗೆ ಒಟ್ಟು 545 ಕೆ.ಜಿ ನಿಷೇಧಿತ ಪ್ಲಾಸ್ಟಿಕ್ಗಳನ್ನು ವಶಪಡಿಸಿಕೊಂಡು 1,18,200 ರೂ. ದಂಡ ವಿಧಿಸಿದ್ದು, ಉದ್ದಿಮೆಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ಗಳನ್ನು ಉಪಯೋಗಿಸದ ಉದ್ದಿಮೆಯನ್ನು ಹಸಿರು ಸಂಸ್ಥೆ ಎಂದು ಘೋಷಿಸಲಾಯಿತು.

ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು ಮನೆ, ಮದುವೆ ಹಾಲ್, ಹೋಟೇಲ್ಗಳಲ್ಲಿ ಸಮಾರಂಭ ಮಾಡುವಾಗ ಹಾಗೂ ರಸ್ತೆ ಬದಿ ಟೀ, ಕಾಫಿ, ತಿಂಡಿ ಮಾರಾಟ ಮಾಡುವವರು ರಾಜ್ಯ ಸರ್ಕಾರದ ನಿರ್ದೇಶನದಂತೆ ರೆಡ್ಯೂಸ್, ರೀಯೂಸ್, ರೀಸೈಕಲ್ ಮಾದರಿಯಲ್ಲಿ ತ್ಯಾಜ್ಯ ವಸ್ತುಗಳನ್ನು ಕಡಿಮೆ ಮಾಡುವ ಹಿತದೃಷ್ಟಿಯಿಂದ ಮರುಬಳಕೆಯ ವಸ್ತುಗಳಾದ ಸ್ಟೀಲ್ ಲೋಟ, ಸ್ಟೀಲ್ ತಟ್ಟೆಗಳನ್ನು ಕಡ್ಡಾಯವಾಗಿ ಬಳಸಿ, ತ್ಯಾಜ್ಯವನ್ನು ಕಡಿಮೆ ಮಾಡಿ ಉಡುಪಿ ನಗರವನ್ನು ಕಸ ಮುಕ್ತ ನಗರವನ್ನಾಗಿ ಮಾಡಬೇಕು.

ಸಾರ್ವಜನಿಕರು, ಉದ್ದಿಮೆದಾರರು, ವ್ಯಾಪಾರಿಯವರು ನಿಷೇಧಿತ ಪ್ಲಾಸ್ಟಿಕ್ಗಳನ್ನು ಉಪಯೋಗಿಸುವುದು ಕಂಡು ಬಂದಲ್ಲಿ ಉದ್ದಿಮೆ ಪರವಾನಿಗೆಯನ್ನು ರದ್ದುಪಡಿಸಿ, ದಂಡ ವಿಧಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular