ಗುಂಡ್ಲುಪೇಟೆ: ಪಟ್ಟಣ ಪುರಸಭೆ ವ್ಯಾಪ್ತಿಯ ವಾಣಿಜ್ಯ ವ್ಯಾಪಾರದ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಮುಕ್ತ ಅಭಿಯಾನದ ಪ್ರಯುಕ್ತ ಅರಿವು ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಪುರಸಭೆ ಆರೋಗ್ಯಾಧಿಕಾರಿ ಗೋಪಿ ನೇತೃತ್ವದಲ್ಲಿ ಪಟ್ಟಣದ ವಿವಿಧ ಅಂಗಡಿಗಳಿಗೆ ತೆರಳಿ ಪರಿಶೀಲನೆ ನಡೆಸಿದರು. ಆ ವೇಳೆ ಹಲವು ಅಂಗಡಿಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುತ್ತಿರುವುದನ್ನು ಕಂಡ ಅಧಿಕಾರಿಗಳು ಪ್ಲಾಸ್ಟಿಕ್ ಗಳನ್ನು ವಶಕ್ಕೆ ಪಡೆದು ಅಂಗಡಿ ಮಾಲೀಕರಿಗೆ ದಂಡ ವಿಧಿಸಿದರು. ವಿವಿಧ ಅಂಗಡಿ ಹಾಗೂ ಹೋಟೆಲ್ ಗಳಲ್ಲಿ ಒಟ್ಟು 64 ಕೆ.ಜಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡೆದು, 4,550 ದಂಡ ವಿಧಿಸಲಾಯಿತು.
ಈ ವೇಳೆ ಪುರಸಭೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.