ಮೈಸೂರು: ಇಂದು ಚಾಮುಂಡಿ ಚಲೋ ಹಮ್ಮಿಕೊಳ್ಳಲಾಗಿತ್ತು. ಆದರೇ ಜಿಲ್ಲಾಡಳಿತ ಇದಕ್ಕೆ ಅವಕಾಶ ನೀಡದೇ ೧೪೪ ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಹಿನ್ನಲೆಯಲ್ಲಿ ಚಲೋ ರದ್ದುಗೊಳಿಸಲಾಗಿದೆ. ಇದರ ನಡುವೆ ಚಾಮುಂಡಿ ತಾಯಿ ದರ್ಶನಕ್ಕೆ ಇಂದು ಭಕ್ತರಿಗೆ ನಿರ್ಬಂಧ ಕೂಡ ವಿಧಿಸಲಾಗಿದೆ.
ಹೌದು ಸಾರ್ವಜನಿಕರಿಗೆ ಯಾರಿಗೂ ಇಂದು ಚಾಮುಂಡಿ ತಾಯಿ ದರ್ಶನ ಪಡೆಯಲು ಅವಕಾಶವಿಲ್ಲ. ಅಲ್ಲದೇ ಚಾಮುಂಡಿ ತಪ್ಪಲಿನಲ್ಲಿ ನಿಷೇಧಾಜ್ಞೆ ಜಾರಿಗೊಂಡಿರುವ ಕಾರಣ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಇಂದು ಮಹಿಷಾ ದಸರಾ ಆಚರಣಾ ಸಮಿತಿಯು ಮಹಿಷ ದರಸ ಆಚರಣೆಗೆ ಕರೆ ನೀಡಿತ್ತು. ಇಂದು ಚಾಮುಂಡಿ ಬೆಟ್ಟದಲ್ಲಿ ಮಹಿಷಾಸುರ ಪ್ರತಿಮೆಗೆ ಪುಷ್ಪಾರ್ಚನೆ, ಪುರಭವನದ ಹೊರಾಂಗಣದಲ್ಲಿ ಮಹಿಷ ಮಂಡಲೋತ್ಸವ ಕಾರ್ಯಕ್ರಮ ಕೂಡ ಹಮ್ಮಿಕೊಳ್ಳಲಾಗಿತ್ತು.
ಆದರೇ ಇದಕ್ಕೆ ಜಿಲ್ಲಾಡಳಿತ ಅವಕಾಶ ನೀಡಿರಲಿಲ್ಲ. ಮುಂಜಾಗ್ರತಾ ಕ್ರಮವಾಗಿ ಚಾಮುಂಡಿ ಬೆಟ್ಟದಲ್ಲಿ ೧೪೪ ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆಯನ್ನು ಜಿಲ್ಲಾಧಿಕಾರಿಗಳು ಹೊರಡಿಸಿದ್ದಾರೆ. ಹೀಗಾಗಿ ಐವರು ಜನರಿಗಿಂತ ಹೆಚ್ಚು ಮಂದಿ ಗುಂಪು ಗೂಡುವುದು, ಸಭೆ, ಸಮಾರಂಭ ನಡೆಸುವುದು ನಿಷೇಧಿಸಲಾಗಿದೆ.