Friday, April 4, 2025
Google search engine

Homeರಾಜ್ಯಪ್ರಾಸಿಕ್ಯೂಷನ್‌ಗೆ ಅನುಮತಿ:BSY ಮನೆಗೆ ಮುತ್ತಿಗೆ ಹಾಕಲು ಯತ್ನ, ಕಾಂಗ್ರೆಸ್ ಕಾರ್ಯಕರ್ತರು ವಶಕ್ಕೆ

ಪ್ರಾಸಿಕ್ಯೂಷನ್‌ಗೆ ಅನುಮತಿ:BSY ಮನೆಗೆ ಮುತ್ತಿಗೆ ಹಾಕಲು ಯತ್ನ, ಕಾಂಗ್ರೆಸ್ ಕಾರ್ಯಕರ್ತರು ವಶಕ್ಕೆ

ಶಿಕಾರಿಪುರ: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ತನಿಖೆ ನಡೆಸಲು ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದನ್ನು ಖಂಡಿಸಿರುವ ಕಾಂಗ್ರೆಸ್ ಮುಖಂಡರು, ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

ಕಾಂಗ್ರೆಸ್ ಕಚೇರಿಯಲ್ಲಿ ಸಭೆ ನಡೆಸಿದ ಮುಖಂಡರು ಹಾಗೂ ಕಾರ್ಯಕರ್ತರು, ಬಿಜೆಪಿ ವಿರುದ್ಧ ಘೋಷಣೆ ಕೂಗುತ್ತಾ ಯಡಿಯೂರಪ್ಪ ಮನೆಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು. ಈ ವೇಳೆ ಅವರನ್ನೆಲ್ಲ ಪೊಲೀಸರು ಬ್ಯಾರಿಕೇಡ್ ಹಾಕಿ ತಡೆದರು.

ನಂತರ ಯಡಿಯೂರಪ್ಪ ಹಾಗೂ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರೂ ಆಗಿರುವ ಅವರ ಮಗ ಬಿ.ವೈ ವಿಜಯೇಂದ್ರ ವಿರುದ್ಧ ದಿಕ್ಕಾರ ಕೂಗುತ್ತಾ, ಯಡಿಯೂರಪ್ಪ ಮನೆಗೆ ನುಗ್ಗಲು ಪ್ರಯತ್ನಿಸಿದವರನ್ನು ವಶಕ್ಕೆ ಪಡೆದ ಪೊಲೀಸರು, ಬಳಿಕ ಬಿಡುಗಡೆಗೊಳಿಸಿದರು.

RELATED ARTICLES
- Advertisment -
Google search engine

Most Popular