ವರದಿ: ರವಿಚಂದ್ರ ಬೂದಿತಿಟ್ಟು
ಪಿರಿಯಾಪಟ್ಟಣ: ತಾಲೂಕಿನ ಗರಿಗುಡ್ಡ ಕಾವಲು ಗ್ರಾಮದ ಸರ್ವೆ ನಂಬರ್ 94ರ ಜಮೀನನ್ನು ಅರಣ್ಯ ಇಲಾಖೆಯು ಮೀಸಲು ಅರಣ್ಯ ವೆಂದು ಘೋಷಿಸಿರುವುದನ್ನು ವಿರೋಧಿಸಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಹಾಗೂ ರಾಜನ ಬಿಲಗುಲಿ ಗ್ರಾಮಸ್ಥರು ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ತಹಶೀಲ್ದಾರ್ ನಿಸರ್ಗ ಪ್ರಿಯ ರವರ ಮೂಲಕ ಮನವಿ ಸಲ್ಲಿಸಿದರು.
ನಂತರ ಮಾತನಾಡಿದ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಜಿಲ್ಲಾಧ್ಯಕ್ಷರಾದ ಕಾಂತರಾಜ್ ಈ ಜಮೀನಿನಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಜನಾಂಗಕ್ಕೆ ಸೇರಿದ ರೈತರು ಸುಮಾರು 60 ರಿಂದ 70 ವರ್ಷಗಳಿಂದ 300 ರಿಂದ 400 ಕುಟುಂಬಗಳು ವ್ಯವಸಾಯ ಮಾಡಿಕೊಂಡು ಬರುತ್ತಿದ್ದು, ಈ ಜಮೀನುಗಳಿಗೆ ಸರ್ಕಾರವು ಈಗಾಗಲೇ ಸಾಗುವಳಿ ನೀಡಿದ್ದು , ಇದರ ಆದರದ ಮೇಲೆ ಎಲ್ಲ ರೈತರು ಬ್ಯಾಂಕುಗಳಲ್ಲಿ ಸಾಲ ಪಡೆದು ಜೀವನ ನಡೆಸುತ್ತಿದ್ದಾರೆ.

ಆದರೆ ಇತ್ತೀಚೆಗೆ ಅರಣ್ಯ ಇಲಾಖೆಯವರು ಗರಿಗುಡ್ಡ ಕಾವಲು ಗ್ರಾಮವನ್ನು ಮೀಸಲು ಅರಣ್ಯ ಪ್ರದೇಶವೆಂದು ಘೋಷಣೆ ಮಾಡಿ ಎಲ್ಲ ರೈತರಿಗೆ ನೋಟಿಸ್ ನೀಡಿ ಒಕ್ಕಲೆಬ್ಬಿಸುವ ಕೆಲಸ ಮಾಡುತ್ತಿದ್ದು ಸರ್ಕಾರವು ಈ ಆದೇಶವನ್ನು ಹಿಂಪಡೆದು ರೈತರಿಗೆ ಅನುಕೂಲ ಮಾಡಿಕೊಡಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಶಂಕರ್ ರಾಜನ ಬಿಲಗುಳಿ ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ಜಗದೀಶ್ ನಾಯಕ, ಶಿವಣ್ಣ, ಮಹದೇವ್, ಕರಿಯಯ್ಯ, ತಮ್ಮಯ್ಯ ನಾಯಕ, ರಾಜು ಶೆಟ್ಟಿ, ಚೆನ್ನಯ್ಯ ಹಾಗೂ ಗ್ರಾಮಸ್ಥರು ಹಾಜರಿದ್ದರು.